Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ದೆಹಲಿಯ ನಾಲ್ಕು ಕೋರ್ಟ್ ಗಳು, ಎರಡು ಶಾಲೆಗಳಿಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ಜೈಶ್ ಉಗ್ರ ಸಂಘಟನೆಯ ಹೆಸರಿನಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ.
ಪಟಿಯಾಲಾ, ದ್ವಾರಕಾ, ಸಾಕೇತ್ ಸೇರಿದಂತೆ ನಾಲ್ಕು ಕೋರ್ಟ್ ಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಇನ್ನು ಪ್ರಶಾಂತ್ ವಿಹಾರ್, ದ್ವಾರಕಾದಲ್ಲಿರುವ ಶಾಲೆಗಳಿಗೂ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಶಾಲಾ ಮಕ್ಕಳನ್ನು ಮನೆಗಳಿಗೆ ಕಳುಹಿಸಿ ಪರಿಶೀಲನೆ ನಡೆಸಲಾಗುತ್ತಿದೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಕೋರ್ಟ್ ಗಳು ಹಾಗೂ ಸಿಆರ್ ಪಿಎಫ್ ಶಾಲೆಗಳಿಗೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ಪರಿಶೀಲನೆ ನಡೆಸಿದೆ.