Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರು ಹಿಂದೂ ಭಾವನೆಗೆ ಧಕ್ಕೆ ತಂದ ಆರೋಪ ಹೊತ್ತಿದ್ದಾರೆ. ಅವರ ವಿರುದ್ಧ ದೂರು ಕೂಡ ದಾಖಲಾಗಿದೆ.
‘ವಾರಣಾಸಿ’ ಕಾರ್ಯಕ್ರಮದ ಸಮಯದಲ್ಲಿ ಕೆಲವು ತಾಂತ್ರಿಕ ತೊಂದರೆಗಳು ಉಂಟಾದ ನಂತರ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡುವಾಗ ರಾಜಮೌಳಿ ಭಾವುಕರಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಾರಣಾಸಿ’ ಟೈಟಲ್ ಲಾಂಚ್ ಮಾಡಲು ಸಾಕಷ್ಟು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಸರಿಯಾದ ಸಮಯಕ್ಕೆ ಟೀಸರ್ ಪ್ರದರ್ಶನ ಮಾಡಲು ಸಾಧ್ಯವಾಗಲೇ ಇಲ್ಲ.
ಈ ಬಗ್ಗೆ ರಾಜಮೌಳಿಗೆ ಬೇಸರ ಉಂಟಾಗಿದೆ. ಹೀಗಾಗಿ, ಹನುಮಾನ್ ದೇವರನ್ನು ರಾಜಮೌಳಿ ದೂಷಿಸಿದರು. ಹನುಮಂತ ಒಳ್ಳೇದು ಮಾಡ್ತಾನೆ ಎಂದು ತಂದೆ ಹೇಳಿದ್ರು. ಆದರೆ, ಒಳ್ಳೇದು ಮಾಡೋದು ಅಂದ್ರೆ ಹೀಗೇನಾ.ರಾಜಮೌಳಿ ಅವರ ಹೇಳಿಕೆ ಹಿಂದೂಗಳ ಭಾವನೆಗೆ ಸಾಕಷ್ಟು ಧಕ್ಕೆ ತಂದಿದೆ. ಸಿನಿಮಾ ರಂಗದಲ್ಲಿ ಹಿಂದೂ ದೇವರನ್ನು ಅಗೌರವಿಸುವ ಪ್ರವೃತ್ತಿ ಹೆಚ್ಚುತ್ತಲೇ ಇದೆ. ಹೀಗಾಗಿ, ಈ ದೂರು ಆಧರಿಸಿ ಕೇಸ್ ದಾಖಲಿಸಿಕೊಳ್ಳಬೇಕು ಮತ್ತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಕೋರಿದ್ದಾರೆ.