Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಹಾಜರಾತಿಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಒನ್ ಕ್ಲಿಕ್ ಅಟೆಂಡೆನ್ಸ್ ಪದ್ಧತಿ ಜಾರಿಗೆ ಬರಲಿದೆ.
ಹೌದು, ರಾಜ್ಯದ ಇ-ಗವರ್ನೆನ್ಸ್ ಇಲಾಖೆಯಿಂದ ಎಐ ಅಟೆಂ ಡೆನ್ಸ್ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದ್ದು, ನಗರದ ಮಲ್ಲೇಶ್ವ ರದಲ್ಲಿರುವ ಸರ್ಕಾರಿ ಶಾಲಾ-ಕಾಲೇಜಿನಲ್ಲಿ ಪ್ರಯೋಗಿಕವಾಗಿ ಬಳಸಲಾಗುತ್ತಿದೆ. ಪ್ರಾಯೋಗಿಕ ಬಳಕೆಯಲ್ಲಿ ಎದುರಾಗುವ ಸವಾಲುಗಳು, ಅನನುಕೂಲಗಳ ಕುರಿತು ಅಧ್ಯಯನ ಮಾಡಲಾಗುತ್ತದೆ. ಅಗತ್ಯಕ್ಕೆ ತಕ್ಕಂತೆ ಸುಧಾರಣೆ, ಬದಲಾವಣೆ ಮಾಡಿಕೊಳ್ಳಲಾಗುತ್ತದೆ. ನಂತರ ಹಂತ ಹಂತವಾಗಿ ಬೇರೆ ಬೇರೆ ಶಾಲೆಗಳಿಗೆ ವಿಸ್ತರಿಸಲಾಗುತ್ತದೆ.
ಬೆಂಗಳೂರು ಟೆಕ್ ಸಮ್ಮಿ ಟ್ನಲ್ಲಿ ಭಾಗವಹಿಸಿರುವ ರಾಜ್ಯ ಸರ್ಕಾರದ ಇ ಗವರ್ನೆನ್ಸ್ ಇಲಾಖೆ, ತನ್ನ ಹೊಸ ಯೋಜನೆಯನ್ನು ಸಾರ್ವಜನಿಕರ ಈಗಾಗಲೇ ಸರ್ಕಾರದ 18 ಇಲಾಖೆಗಳಲ್ಲಿ ಮುಖಚಹರೆ ಸಹಿತ ಮೊಬೈಲ್ ಫೋನ್ ಆಧಾರಿತ ವರ್ಕ್ ಅಟೆಂಡೆನ್ಸ್ ಅನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದ್ದು, ಶಾಲಾ ಕಾಲೇಜುಗಳಲ್ಲಿಯೂ ಎಐ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲಾಗುವುದು. ಇದರಿಂದ ಸಮಯ ಉಳಿತಾಯವಾಗಿ ಬೋಧನೆಗೆ ಹೆಚ್ಚಿನ ಅವಕಾಶ ಸಿಗಲಿದೆ.