Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಹಾಗೂ ಉಗ್ರರಿಗೂ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆಗಿದ್ದು, ಸದ್ಯ ಈ ಪ್ರಕರಣ ರಾಜ್ಯದ ಕಾನೂನು ವ್ಯವಸ್ಥೆಯಲ್ಲೇ ಕೋಲಾಹಲ ಸೃಷ್ಟಿಸಿದೆ.
ಈ ಪ್ರಕರಣದ ವಿಚಾರಣೆ ಮಾಡುವಾಗ ಧನ್ವೀರ್ ಅವರು ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೆಸರನ್ನು ಹೇಳಿದ್ದಾರೆ. ಈ ಮೊದಲು ಧನ್ವೀರ್ ಅವರು ವಿಚಾರಣೆ ಎದುರಿಸಿದ್ದರು. ಈ ವೇಳೆ ಅವರು ಯಾವುದೇ ವಿಷಯ ಬಾಯ್ಬಿಟ್ಟಿರಲಿಲ್ಲ. ಇದಾದ ಬಳಿಕ ಮತ್ತೆ ಅವರಿಗೆ ನೋಟಿಸ್ ನೀಡಲಾಯಿತು. ಎರಡನೇ ಬಾರಿಗೆ ಧನ್ವೀರ್ ಅವರು ಪೊಲೀಸರ ಎದುರು ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಈ ವೇಳೆ ಹಲವು ವಿಷಯಗಳನ್ನು ರಿವೀಲ್ ಮಾಡಿದ್ದಾರೆ ಎನ್ನಲಾಗಿದೆ. ವಿಡಿಯೋ ಕಳುಹಿಸಿದ್ದು ಯಾರು ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ.
ಧನ್ವೀರ್‌ಗೆ ಈ ವಿಡಿಯೋ ಸಿಕ್ಕಿದ್ದು ವಕೀಲರಿಂದ. ನಂತರ ಈ ವಿಡಿಯೋನ ಅವರು ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕಳುಹಿಸಿದ್ದಾರೆ. ಇದನ್ನು ವಿಚಾರಣೆ ವೇಳೆ ಹೇಳಿದ್ದಾರೆ. ನಾನು ವಿಡಿಯೋ ವೈರಲ್ ಮಾಡಿಲ್ಲ. ಈ ವಿಡಿಯೋ ಹೇಗೆ ವೈರಲ್ ಆಗಿದೆ ಅನ್ನೋದು ಗೊತ್ತಿಲ್ಲ. ನಾನು ವಿಜಯಲಕ್ಷ್ಮೀ ಅವರಿಗೆ ವಿಡಿಯೋನ ಫಾರ್ವರ್ಡ್ ಮಾಡಿದ್ದೆ ಎಂದು ಧನ್ವೀರ್ ಮಾಹಿತಿ ನೀಡಿದ್ದಾರೆ.