newsics.com
ವಿಜಯಪುರ: ಚಲಿಸುತ್ತಿದ್ದ ಬಸ್ನಿಂದ ಬಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಸಿಂಧಗಿ ತಾಲೂಕಿನ ಬನ್ನಿಹಟ್ಟಿ ಪಿ.ಎ ಗ್ರಾಮದಲ್ಲಿ ನಡೆದಿದೆ.
ಬಸ್‌ನಿಂದ ಬಿದ್ದ ವಿದ್ಯಾರ್ಥಿಯು ಹಿಂಬದಿ ಚಕ್ರಕ್ಕೆ ಸಿಲುಕಿದ್ದಾನೆ. ಬಾಲಕನ್ನು ಉಳಿಸಲು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಸಂದೀ ಗಿಡ್ಡನಗೋಳ ಎಂಬುವ 16 ವರ್ಷದ ಬಾಲಕ ಸಿಂಧಗಿ ಪಟ್ಟಣದ ಹೆಚ್.ಜಿ ಹೈಸ್ಕೂಲ್ನಲ್ಲಿ 10ನೇ ತರಗತಿ ಓದುತ್ತಿದ್ದ. ಚಲಿಸುತ್ತಿದ್ದ ಬಸ್ನಿಂದ ಜಿಗಿಯುವಾಗ ಬಸ್ನ ಹಿಂಬದಿ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ.
ಘಟನೆಗೆ ಬಸ್ ಚಾಲಕ ಹಾಗೂ ನಿರ್ವಾಹಕನ ನಿರ್ಲಕ್ಷ್ಯವೇ ಕಾರಣವೆಂದು ಗ್ರಾಮಸ್ಥರು ಅರೋಪಿಸಿದ್ದಾರೆ. ಅಷ್ಟು ಮಾತ್ರವಲ್ಲ ಕೂಡಲೇ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.