Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಸಿಎಂಎಸ್ ಸಿಬ್ಬಂದಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಮೂಲಕ ಬಹುತೇಕ ಎಲ್ಲಾ ಆರೋಪಿಗಳ ಬಂಧನವಾಗಿದೆ ಎನ್ನಲಾಗಿದೆ.
ಗೋಪಿ ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಮೂಲಕ ಎಲ್ಲಾ ಆರೋಪಿಗಳ ಬಂಧನವಾಗಿದೆ.
ಬೆಂಗಳೂರು ಸಿಸಿಬಿ, ದಕ್ಷಿಣ ವಿಭಾಗದ ಪೊಲೀಸರ ತಂಡ ಸೇರಿ ಆಂಧ್ರ ಮತ್ತು ತಮಿಳುನಾಡಿನಲ್ಲೂ ಕಾರ್ಯಾಚರಣೆ ನಡೆಸಿದ್ದು, ಐದಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಡಿಸಿಪಿ, ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಹಾಗೂ 50ಕ್ಕೂ ಹೆಚ್ಚು ಪೊಲೀಸರು ಸೇರಿ ನಡೆಸಿದ ಶೋಧದ ಫಲವಾಗಿ ಕಳೆದ ರಾತ್ರಿ 6 ಕೋಟಿ 70 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ರವಿ ಮೂಲತಃ ಆಂದ್ರದ ಚಿತ್ತೂರು ಜಿಲ್ಲೆ ನಿವಾಸಿಯಾಗಿದ್ದು, ಈತ ಪೊಲೀಸ್ ಪೇದೆ ಅಣ್ಣಪ್ಪನ ಜೊತೆಗೆ ಸಂಪರ್ಕ ಹೊಂದಿದ್ದ ಎಂದು ಹೇಳಲಾಗಿದ್ದು, ಇದೀಗ ಚಿತ್ತಾಪುರದಲ್ಲಿ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿದ್ದಾನೆ.