Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ರಸ್ತೆಗುಂಡಿ ತಪ್ಪಿಸಲು ಹೋಗಿ ಚಾಲಕನ ಸಮೇತ ಲಾರಿ ಎಂದು ಕೆರೆಗೆ ಉರುಳಿ ಬಿದ್ದಿರುವ ಸಾವನ್ನಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬಿದರಗುಪ್ಪೆ ಕೆರೆಯಲ್ಲಿ ನಡೆದಿದೆ.
ಕಲಬುರಗಿ ಮೂಲದ ಲಾರಿ ಚಾಲಕ ಮಹೇಶ್ (37) ಕೆರೆಯಲ್ಲಿ ಮುಳುಗಿರುವ ಸಾಧ್ಯತೆಯಿದೆ. ಅತ್ತಿಬೆಲೆಯಿಂದ ಸರ್ಜಾಪುರ ಮಾರ್ಗವಾಗಿ ಹೋಗುತ್ತಿದ್ದ ಲಾರಿ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಚಾಲಕನ ಸಮೇತವಾಗಿ ಕೆರೆಗೆ ಬಿದ್ದಿದೆ. ಘಟನೆಯಲ್ಲಿ ಚಾಲಕ ಜಲಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಸದ್ಯ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್, ಅಗ್ನಿಶಾಮಕ ತಂಡ ಹಾಗೂ ಪೊಲೀಸರು ಆಗಮಿಸಿದ್ದು, ಕ್ರೇನ್ ಬಳಸಿ ಲಾರಿ ಮೇಲೆತ್ತಲು ಕಾರ್ಯಾಚರಣೆ ನಡೆಸಲಾಗುತ್ತಿದೆ.