Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ghati Subrahmanya 29 ಕೋಟಿ ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕಪ್ರಮುಖ

Ghati Subrahmanya 29 ಕೋಟಿ ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

29 ಕೋಟಿ ರೂ. ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಂಗಳವಾರ ಸಮಗ್ರ
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 29 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಾಗಿದೆ ಎಂದರು.

16 ಕೋಟಿ ವೆಚ್ಚದಲ್ಲಿ ದಾಸೋಹ ಭವನ, 1.96 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ, 3.53 ಕೋಟಿ ವೆಚ್ಚದಲ್ಲಿ ರಥ ಬೀದಿ ಅಭಿವೃದ್ಧಿ, 1.62 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ಮೇಲ್ದರ್ಜೆರಿಗೇರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

28 ಲಕ್ಷ ವೆಚ್ಚದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯವುಳ್ಳ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗುವುದು. 43 ಲಕ್ಷ ವೆಚ್ಚದಲ್ಲಿ ಹೊಸ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದರು.

ಅಲ್ಲದೆ ಈ ಬಾರಿ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ನ.25ರ ಗುರುವಾರ ನಡೆಯಲಿದೆ. ಈ ಬಾರಿ ವಿಶೇಷವಾಗಿ ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಲಾಗುವುದು ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಡಿಸೆಂಬರ್ 1ರಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸುವ ವಾಹನಗಳ ಸುಂಕ ವಸೂಲಾತಿ ರದ್ದುಗೊಳಿಸಿ, ಉಚಿತವಾಗಿ ವಾಹನಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು. ಹಿರಿಯ ನಾಗರಿಕರು, ವಿಶಿಷ್ಟಚೇತನರು, ವರ್ಷದೊಳಗಿನ ಶಿಶುಗಳ ತಾಯಂದಿರಿಗೆ ಮತ್ತು ಗರ್ಭಿಣಿಯರಿಗೆ ವಿಶೇಷ ದರ್ಶನದ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಈ ಬಾರಿ ರಾಸುಗಳ ಜಾತ್ರೆ ಡಿ. 10ರಿಂದ 18ರವರೆಗೆ ನಡೆಯಲಿದೆ. ರಾಸುಗಳ ಜಾತ್ರಾ ಸಮಯದಲ್ಲಿ ವಿಶೇಷ ದೀಪಾಲಂಕಾರ, ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗುವುದು. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದಲೇ ಮಾಡಲಾಗುವುದು ಎಂದು ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು.

ಈ ವೇಳೆ ಸಚಿವ ಮುನಿಯಪ್ಪ, ಮುಜರಾಯಿ ಆಯುಕ್ತ ಶರತ್, ಜಿಲ್ಲಾಧಿಕಾರಿ ಬಸವರಾಜು ಎ.ಬಿ., ಕಾರ್ಯನಿರ್ವಹಣಾಧಿಕಾರಿ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.

ದೆಹಲಿ ಏರ್ ಪೋರ್ಟ್ ನಿಂದ 7 ಅಂತರಾಷ್ಟ್ರೀಯ ವಿಮಾನ ದಿಢೀರ್ ರದ್ದು

ಇದೆಂಥಾ ಶಿಕ್ಷೆ….ಹೋಂ ವರ್ಕ್ ಮಾಡಿಲ್ಲವೆಂದು 4 ವರ್ಷದ ಮಗುವನ್ನು ಮರಕ್ಕೆ ನೇತುಹಾಕಿದ ಶಿಕ್ಷಕರು- ವೈರಲ್ ವಿಡಿಯೋ ನೋಡಿ

ಸಿಡಿದ ಇಥಿಯೋಪಿಯಾದ ಜ್ವಾಲಾಮುಖಿ ಪರ್ವತ: ಭಾರತದತ್ತ ಬೂದಿ, ಏರ್‌ಪೋರ್ಟ್‌ಗಳಿಗೆ ಸಿಕ್ಕ ಸೂಚನೆ ಏನು?

TAGGED:Ghati Subrahmanya development at a cost of Rs 29 crore: Minister Ramalinga Reddy
Share This Article
Facebook Twitter Copy Link Print
Previous Article ಕನ್ನೇರಿ ಶ್ರೀಗಳಿಗೆ ಧಾರವಾಡ ನಿರ್ಬಂಧ ತೆರವುಗೊಳಿಸಿ ಹೈಕೋರ್ಟ್ ಆದೇಶ
Next Article Senior IAS officer Mahantesh Beelagi die ಕಾರು ಪಲ್ಟಿ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಇನ್ನಿಬ್ಬರು ಸಹೋದರರು ಸಾವು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?