Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಪಿಜಿಯಲ್ಲಿ ನೇಣು ಬಿಗಿದುಕೊಂಡು 19 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಮೃತಳನ್ನು ಹಾಸನ ಮೂಲದ ವತ್ಸಲ (19) ಎಂದು ಗುರುತಿಲಾಗಿದೆ.ವತ್ಸಲ ಬಿ ಫಾರಂ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದಳು. ಪೆಟಲ್ಸ್ ಗರ್ಲ್ಸ್ ಪಿಜಿಯಲ್ಲಿ ವಾಸವಿದ್ದ ಈಕೆ ಧಿಡೀರ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಸೋಲದೇವನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ