Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನೆಲಮಂಗಲ ಮನೆಯ ಮುಂದೆ ರಸ್ತೆ ಮೇಲೆ ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹರಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ನೆಲಮಂಗಲದ ಟಿ ಬಿ ಸ್ಟಾಪ್ ಬಳಿಯ ಸುಭಾಷ್ ನಗರದ ತಿರುವಿನಲ್ಲಿ ವೇಗವಾಗಿ ಬಂದ ಮಾರುತಿ ಎಟ್ರಿಕಾ ಕಾರು ನಿಯಂತ್ರಣ ತಪ್ಪಿ ಮನೆಯ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ದಕ್ಷಿತ್ ಎಂಬ ಮಗುವಿನ ಮೇಲೆ ಹರಿದಿದೆ. ಮಗುವಿನ ಚೀರಾಟ ಕೇಳಿದ ಮನೆಮಂದಿ ಮತ್ತು ನೆರೆಹೊರೆಯವರು ಕಂಗಾಲಾಗಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.