Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕ್ಯಾಲಿಫೋರ್ನಿಯಾ: ಮಕ್ಕಳ ಬರ್ತ್ ಡೇ ಪಾರ್ಟಿ ವೇಳೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.
ಕ್ಯಾಲಿಫೋರ್ನಿಯಾದ ಸ್ಟಾಕ್ಟನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಕ್ಕಳ ಹುಟ್ಟುಹಬ್ಬ ಆಚರಣೆ ವೇಳೆ ಏಕಾಏಕಿ ನುಗ್ಗಿದ್ದ ದುಷ್ಕರ್ಮಿಗಳು ನೆರೆದಿದ್ದ ಜನರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.