Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ಕರ್ನಾಟಕ ಕುರ್ಚಿ ಕದನಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಹೈವೋಲ್ಟೇಜ್ ಮೀತಿಂಗ್ ನಡೆಯಲಿದೆ.
ಸೋನಿಯಾ ಗಾಂಧಿ ಅವರ ದೆಹಲಿ ನಿವಾಸದಲ್ಲಿ ಇಂದು ಸಂಜೆ 5 ಗಂಟೆಗೆ ಕಾಂಗ್ರೆಸ್ ಸಂಸದೀಯ ಸಭೆ ನಡೆಯಲಿದ್ದು, ಕರ್ನಾಟಕ ರಾಜ್ಯ ರಾಜಕಾರಣ, ವಿವಿಧ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ.
ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.