newsics.com
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಳೆ ಹಿನ್ನೆಲೆಯಲ್ಲಿ ಮಲೆನಾಡಿನ ಚಿಕ್ಕಮಗಳೂರು, ಕೊಡುಗು ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಇನ್ನೂ ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇಲ್ಲ.
ಕೊಡಗಿನಲ್ಲೂ ಭಾರಿ ಗಾಳಿ-ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ಒಂದು ದಿನ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಹೊರತು ಪಡಿಸಿ, ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿ, ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.