Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಂಧ್ರಪ್ರದೇಶದಲ್ಲಿ ಹೆಚ್ಚಿದ ಸ್ಕ್ರಬ್​ ಟೈಫಸ್ ಜ್ವರದ​ ಭೀತಿ; ಮೊದಲ ಬಲಿ
ಕರ್ನಾಟಕದೇಶ

ಆಂಧ್ರಪ್ರದೇಶದಲ್ಲಿ ಹೆಚ್ಚಿದ ಸ್ಕ್ರಬ್​ ಟೈಫಸ್ ಜ್ವರದ​ ಭೀತಿ; ಮೊದಲ ಬಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನೆರೆಯ ಆಂಧ್ರಪ್ರದೇಶದಲ್ಲಿ ‘ಸ್ಕ್ರಬ್ ಟೈಫಸ್’ ಎಂಬ ಬ್ಯಾಕ್ಟೀರಿಯಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು,  ಆಂಧ್ರಪ್ರದೇಶದ ಜತೆ ಗಡಿ ಹಂಚಿಕೊಂಡಿರುವ ಕರ್ನಾಟಕದಲ್ಲೂ ಆತಂಕ ಸೃಷ್ಟಿಯಾಗಿದೆ. ಮುನ್ನೆಚ್ಚರಿಕೆ ಕೈಗೊಳ್ಳುವ ಅನಿವಾರ್ಯತೆ ಎದುರಾಗಿದೆ. ವಿಜಯನಗರಂ ಜಿಲ್ಲೆಯಲ್ಲಿ ಈ ಸೋಂಕಿನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂಬ ವರದಿಗಳು ಬಂದಿದ್ದು, ರಾಜ್ಯಾದ್ಯಂತ ಇಲ್ಲಿಯವರೆಗೆ 1,317 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ವಿಜಯನಗರಂ ಜಿಲ್ಲೆಯ ಚೀಪುರುಪಲ್ಲಿ ಮಂಡಲದ ಮಿತ್ತಪಲ್ಲಿ ಗ್ರಾಮದ ರಾಜೇಶ್ವರಿ (36) ಎಂಬುವವರು ನವೆಂಬರ್ 30ರಂದು ಮೃತಪಟ್ಟಿದ್ದಾರೆ. ಇವರು ಕಳೆದ ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಅವರಿಗೆ ‘ಸ್ಕ್ರಬ್ ಟೈಫಸ್’ ಬ್ಯಾಕ್ಟೀರಿಯಾ ಸೋಂಕು ಇರುವುದು ಕಂಡುಬಂದಿತ್ತು. ಚಿಕಿತ್ಸೆ ಪಡೆದರೂ ಅವರ ಆರೋಗ್ಯ ಹದಗೆಟ್ಟು, ಅಂತಿಮವಾಗಿ ಸಾವನ್ನಪ್ಪಿದ್ದಾರೆ.

ಏನಿದು ಸೋಂಕು?: ಉಣ್ಣಿ ಹೋಲುವ ಸಣ್ಣ ಕೀಟದಿಂದ ಈ ಸೋಂಕು ತಗುಲುತ್ತದೆ. ಸ್ಕ್ರಬ್ ಟೈಫಸ್ ರಿಕೆಟ್ಸಿಯಾ ಕುಟುಂಬಕ್ಕೆ ಸೇರಿದ ಓರಿಯೆಂಟಿಯಾ ಸುಟ್ಸುಗಮುಶಿ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುತ್ತದೆ. ಈ ಕೀಟ ಕಚ್ಚಿದಾಗ, ದೇಹದ ಮೇಲೆ ಕಪ್ಪು ಚುಕ್ಕೆ ಮತ್ತು ದದ್ದು ಕಾಣಿಸಿಕೊಳ್ಳುತ್ತದೆ. ಒಂದು ವಾರ ಅಥವಾ ಹತ್ತು ದಿನಗಳ ನಂತರ ಸೋಂಕು ಜ್ವರ, ಶೀತ, ತಲೆನೋವು, ಸ್ನಾಯು ನೋವು ಮತ್ತು ಜೀರ್ಣಕಾರಿ ಸಮಸ್ಯೆ ಕಂಡು ಬರುತ್ತದೆ. ಈ ಸೋಂಕಿಗೆ ಸೂಕ್ತ ಸಮಯದಲ್ಲಿ ಪತ್ತೆ ಮಾಡಿ ಚಿಕಿತ್ಸೆ ನೀಡದಿದ್ದರೆ, ತೀವ್ರವಾದ ಉಸಿರಾಟದ ತೊಂದರೆ, ಸಿಂಡ್ರೋಮ್, ಮೆದುಳು ಮತ್ತು ಬೆನ್ನುಮೂಳೆಯ ಸೋಂಕುಗಳು (ಮೆನಿಂಜೈಟಿಸ್) ಮತ್ತು ಮೂತ್ರಪಿಂಡ ವೈಫಲ್ಯಕ್ಕೆ ಕಾರಣವಾಗಬಹುದು.

 

TAGGED:#Fears #scrubtyphus #fever #increase #AndhraPradesh
Share This Article
Facebook Twitter Copy Link Print
Previous Article ಮೊಬೈಲ್ ನಲ್ಲಿ ಸಂಚಾರ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯ – ಕೇಂದ್ರ ಸರ್ಕಾರ
Next Article ದತ್ತ ಜಯಂತಿ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?