Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಪಟ್ಟದಿಂದ ಸಿದ್ದರಾಮಯ್ಯ ಕೆಳಗಿಳಿಸಲು ಯತ್ನಿಸಿದರೆ ದಂಗೆ: ಕಾಂಗ್ರೆಸ್ ಹೈಕಮಾಂಡ್‌ಗೆ ಶೋಷಿತ ಸಮುದಾಯಗಳ ಒಕ್ಕೂಟ ಎಚ್ಚರಿಕೆ
ಕರ್ನಾಟಕಪ್ರಮುಖ

ಸಿಎಂ ಪಟ್ಟದಿಂದ ಸಿದ್ದರಾಮಯ್ಯ ಕೆಳಗಿಳಿಸಲು ಯತ್ನಿಸಿದರೆ ದಂಗೆ: ಕಾಂಗ್ರೆಸ್ ಹೈಕಮಾಂಡ್‌ಗೆ ಶೋಷಿತ ಸಮುದಾಯಗಳ ಒಕ್ಕೂಟ ಎಚ್ಚರಿಕೆ

Share
1 Min Read
SHARE

newsics.com

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಹೈಕಮಾಂಡ್ ಪ್ರಯತ್ನಪಟ್ಟರೆ ಅವರ ವಿರುದ್ಧವೂ ಹೋರಾಟ ಮಾಡಬೇಕಾಗುತ್ತದೆ ಎಂದು ಶೋಷಿತ ಸಮುದಾಯಗಳ ಒಕ್ಕೂಟ ಕಾಂಗ್ರೆಸ್ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೊಷಿತ ಸಮಯದಾಯಗಳ ಒಕ್ಕೂಟದ ಮುಖಂಡರು, ಸಿದ್ದರಾಮಯ್ಯ ಅವರು ಇನ್ನೊಂದು ಬಾರಿ ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ಕಾರಣಕ್ಕೆ ಅಹಿಂದ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಂದಿವೆ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬರುತ್ತಿರಲಿಲ್ಲ ಎಂದು ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಪರೋಕ್ಷವಾಗಿ ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ ನೀಡಿದರು.

ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಸಿದ್ದರಾಮಯ್ಯ ಕಳಂಕರಹಿತರು. ಆದರೆ ರಾಜಕೀಯ ದುರುದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ರಾಜಕೀಯ ಹಿತಾಸಕ್ತಿ ಕಾಪಾಡಿಕೊಳ್ಳಲು ಬಿಜೆಪಿಯವರು ಹೀಗೆ ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪರ ವಕಾಲತ್ತು ವಹಿಸಿದರು.

ಒಂದು ವೇಳೆ ಸಂಚುಮಾಡಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆ ಏಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿಯವರ ಹಾಗೂ ಕಾಂಗ್ರೆಸ್ ಪಕ್ಷದಲ್ಲಿರುವವರ ಕೆಲವರ ಮಾತನ್ನು ಕೇಳಿ ಹೈಕಮಾಂಡ್ ಏನಾದ್ರೂ ಸಿದ್ದರಾಮಯ್ಯ ವಿರುದ್ಧ ನಿರ್ಣಯ ಕೈಗೊಂಡರೆ ಮುಂದೆ ಆಗುವ ಘಟನೆಗಳಿಗೆ ಕೇಂದ್ರ ಬಿಜೆಪಿಯೇ ಹೊಣೆಯಾಗಬೇಕಾಗುತ್ತದೆ. ಬಿಜೆಪಿಯವರು ಬೆಂಗಳೂರಿನಿಂದ ಪಾದಯಾತ್ರೆ ಬಂದರೆ ನಾವು ಮೈಸೂರಿನಿಂದ ಪಾದಯಾತ್ರೆ ಮಾಡಬೇಕಾಗುತ್ತದೆ ಎಂದೂ ಎಚ್ಚರಿಸಿದರು.

ಶಾಸಕರನ್ನು ಹೈಜಾಕ್ ಮಾಡಿಯೇ ಕುಮಾರಸ್ವಾಮಿ ಅಧಿಕಾರಕ್ಕೆ ಬಂದಿದ್ದು, ಜೆಡಿಎಸ್ ಅಧಿಕಾರದ ಹತ್ತಿರಕ್ಕೇ ಹೋಗಿಲ್ಲ. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ದಂಗೆ ಏಳಬೇಕಾಗುತ್ತದೆ ಎಂದು ಒಕ್ಕೂಟ ಎಚ್ಚರಿಸಿದೆ. ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಹುನ್ನಾರ ನಡೆದರೆ ಕೇಂದ್ರ ಸರ್ಕಾರದ ವಿರುದ್ಧವೂ ದಂಗೆ ಏಳಬೇಕಾಗುತ್ತದೆ ಎಂದು ಮಾವಳ್ಳಿ ಶಂಕರ್ ಎಚ್ಚರಿಸಿದರು.

VIDEO: ಒಲಿಂಪಿಕ್ಸ್ ನಲ್ಲಿ ನೀಡಲಾಗಿದ್ದ ಕಾಂಡೋಮ್ ಅನ್‌ ಬಾಕ್ಸಿಂಗ್ ಮಾಡಿದ ಮಹಿಳಾ ಸ್ಪರ್ಧಿ

ಕಿಸ್ಗೆ 110 ರೂ, ಅಪ್ಪುಗೆಗೆ 11 ರೂ., ಇದು ಸ್ಟ್ರೀಟ್‌ ಗರ್ಲ್‌ಫ್ರೆಂಡ್‌

ಕೇರಳ ಭೂಕುಸಿತಕ್ಕೆ ಕಾರಣ ಶುಂಠಿ ಬೆಳೆನಾ? ಈ ಬಗ್ಗೆ ವಿಜ್ಞಾನಿಗಳು ಹೇಳಿದ್ದು…

TAGGED:Rebellion if Siddaramaiah is tried to be removed from the post of CM: Union of Exploited Communities warns Congress High Command
Share This Article
Facebook Twitter Copy Link Print
Previous Article VIDEO: ಒಲಿಂಪಿಕ್ಸ್ ನಲ್ಲಿ ನೀಡಲಾಗಿದ್ದ ಕಾಂಡೋಮ್ ಅನ್‌ ಬಾಕ್ಸಿಂಗ್ ಮಾಡಿದ ಮಹಿಳಾ ಸ್ಪರ್ಧಿ
Next Article ಆಗಸ್ಟ್ 3ರವರೆಗೂ ರಾಜ್ಯದ ಹಲವೆಡೆ ಭಾರೀ‌ ಮಳೆ: ಹವಾಮಾನ ಇಲಾಖೆ ಮಾಹಿತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?