Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ದಿತ್ವಾ ಚಂಡಮಾರುತದ ತೀವ್ರತೆ ತಗ್ಗಿ ವಾಯುಭಾರ ಕುಸಿತವಾಗಿ ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ. ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ಗ್ರಾಮಾಂತರದಲ್ಲಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದ್ದು, ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ. ಡಿಸೆಂಬರ್ 6, 8 ರಂದು ರಾಜ್ಯದಾದ್ಯಂತ (ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು) ಒಣ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಿರುವ ಇಲಾಖೆ, ‘ಯೆಲ್ಲೊಅಲರ್ಟ್’ ಘೋಷಿಸಿದೆ.