Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka politics ಹೈಕಮಾಂಡ್‌ಗೆ ವರದಿ ನೀಡಿದ ಡಿಕೆಶಿ: ಸಿಎಂ ಆಪ್ತ ಸಚಿವ, ಶಾಸಕರಿಗೆ ನಡುಕ, ವರದಿಯಲ್ಲೇನಿದೆ?
ಕರ್ನಾಟಕದೇಶಪ್ರಮುಖ

Karnataka politics ಹೈಕಮಾಂಡ್‌ಗೆ ವರದಿ ನೀಡಿದ ಡಿಕೆಶಿ: ಸಿಎಂ ಆಪ್ತ ಸಚಿವ, ಶಾಸಕರಿಗೆ ನಡುಕ, ವರದಿಯಲ್ಲೇನಿದೆ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಇತ್ತೀಚಿನ ರಾಜಕೀಯ ಬೆಳವಣಿಗೆಗಳಲ್ಲಿ ಸಿದ್ದರಾಮಯ್ಯ ಅವರ ಗುಂಪಿನಲ್ಲಿ ಕಾಣಿಸಿಕೊಂಡು, ತಮಗೆ ಎದುರಾಗಿ ನಿಂತಿರುವ ಸಚಿವರ ಮತ್ತು ಶಾಸಕರ ವಿರುದ್ಧ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌‍ ಹೈಕಮಾಂಡ್‌ಗೆ ವರದಿ ನೀಡಿದ್ದಾರೆ.

ಬುಧವಾರ(ಡಿ.3) ದೆಹಲಿಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್‌ ಪಕ್ಷದ ವರಿಷ್ಠರ ಜತೆ ಮಾತುಕತೆ ನಡೆಸಿದ್ದಾರೆ. ಅದರಲ್ಲೂ ಸಂಘಟನಾತ್ಮಕ ಚಟುವಟಿಕೆಗಳ ಉಸ್ತುವಾರಿ ನೋಡಿಕೊಳ್ಳುವ ಮತ್ತು ಅದರ ಬಗ್ಗೆ ಕಾಲಕಾಲಕ್ಕೆ ವರದಿ ಪಡೆಯುವ ಎಐಸಿಸಿ ಪ್ರಧಾನ ಕಾರ್ಯದರ್ಶಿಯವರನ್ನೇ ಭೇಟಿ ಮಾಡಿ ವರದಿ ನೀಡಿದ್ದಾರೆ.

ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಹಕರಿಸದ ಶಾಸಕರು ಮತ್ತು ಸಚಿವರ ಪಟ್ಟಿಯನ್ನು ಹೈಕಮಾಂಡ್‌ ಗೆ ಸಲ್ಲಿಸಿದ್ದು, ಇವರು ಪಕ್ಷದಿಂದ ಲಾಭ ಪಡೆದಿದ್ದಾರೆ. ಆದರೆ ಪಕ್ಷಕ್ಕೆ ಅವರ ಕೊಡುಗೆ ನಿರಾಶಾದಾಯಕ ಎಂದು ಆಕ್ಷೇಪಿಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಮತಗಳ್ಳತನದ ವಿರುದ್ಧ ಪ್ರತಿಭಟನೆ ನಡೆಸಿದಾಗ, ಸದಸ್ಯತ್ವ ನೋಂದಣಿ ಸೇರಿದಂತೆ ಕಾಂಗ್ರೆಸ್‌‍ ವತಿಯಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಬೆಂಬಲಿಸಬೇಕು ಎಂದು ವರಿಷ್ಠ ನಾಯಕರು ಪಕ್ಷದ ಶಾಸಕರು ಮತ್ತು ಸಚಿವರಿಗೆ ಸೂಚನೆ ನೀಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಬಹಳಷ್ಟು ಶಾಸಕರು ಮತ್ತು ಸಚಿವರು ಪಕ್ಷದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳದೆ ಅನಾದರಣೆ ತೋರಿಸಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಇಂತಹ ಉಡಾಫೆಯ ಶಾಸಕರು ಹಾಗೂ ಸಚಿವರಿಗೆ ಹಲವು ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೂ ಅದನ್ನು ಲೆಕ್ಕಿಸದೆ ಶಾಸಕರು, ಸಚಿವರು ತಮ್ಮ ಧೋರಣೆಯನ್ನು ಮುಂದುವರಿಸಿದ್ದಾರೆ. ಮುಂದಿನ ಸಚಿವ ಸಂಪುಟ ಪುನರ್‌ ರಚನೆಯ ವೇಳೆಯಲ್ಲಿ ಅಂತಹವರನ್ನು ಕೈಬಿಡಬೇಕು. ಶಾಸಕರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಮನವಿ ಮಾಡಿರುವುದಾಗಿ ತಿಳಿದುಬಂದಿದೆ.

ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಪಟ್ಟಿ ಸಂಪುಟದಲ್ಲಿನ ಬಹಳಷ್ಟು ಸಚಿವರಿಗೆ ನಡುಕ ಹುಟ್ಟಿಸಿದೆ. ಸಚಿವ ಸಂಪುಟ ವಿಸ್ತರಣೆಯಾಗಲೇಬೇಕು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರೆ, ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಪಟ್ಟಿ ಬ್ರಹಾಸ್ತ್ರವಾಗಲಿದೆ. ಸುಮಾರು 20ಕ್ಕೂ ಹೆಚ್ಚು ಸಚಿವರನ್ನು ವಜಾಗೊಳಿಸುವ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಲಾಗಿದೆ.

ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಪಟ್ಟಿಯಲ್ಲಿ ಪ್ರಭಾವಿ ಮತ್ತು ಸಿದ್ದರಾಮಯ್ಯ ಅವರ ಆಪ್ತ ಸಚಿವರ ಹೆಸರುಗಳಿವೆ ಎನ್ನಲಾಗುತ್ತಿದೆ.

ಡಿ.ಕೆ.ಶಿವಕುಮಾರ್‌ ದೆಹಲಿ ಪ್ರವಾಸ ಮಹತ್ವದ ಬೆಳವಣಿಗೆ ಎನ್ನಲಾಗುತ್ತಿದೆ. ಪಕ್ಷ ಹಾಗೂ ಸರ್ಕಾರದ ಜವಾಬ್ದಾರಿಗಳನ್ನು ನಿಭಾಯಿಸುವ ಬದಲಿಗೆ ಪರ-ವಿರೋಧ ಚರ್ಚೆ ಮಾಡುತ್ತಾ ರಾಜಕೀಯ ಗೊಂದಲಗಳನ್ನು ಮೂಡಿಸುತ್ತಿದ್ದ ಸಚಿವರಿಗೆ ಮತ್ತು ಶಾಸಕರಿಗೆ ಈ ಮೂಲಕ ಡಿ.ಕೆ.ಶಿವಕುಮಾರ್‌ ಟಾಂಗ್‌ ನೀಡಲಾರಂಭಿಸಿದ್ದಾರೆ.

ಅಭಿಮಾನಿಗಳ ಮುಂದೆ ಶಾರುಖ್‌ ಖಾನ್‌ ಪುತ್ರನಿಂದ ಅಸಭ್ಯ ವರ್ತನೆ

ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ: ಉಪ ಲೋಕಾಯುಕ್ತರ ಸ್ಫೋಟಕ ಹೇಳಿಕೆ

ಸಮಂತಾ ಮದುವೆ ಬೆನ್ನಲ್ಲೇ ಗುಡ್‌ನ್ಯೂಸ್ ಕೊಟ್ಟ ನಾಗ ಚೈತನ್ಯ-ಶೋಭಿತಾ ಜೋಡಿ

TAGGED:DK reports to high command: CM's close ministerMLAs are nervouswhat's in the report?
Share This Article
Facebook Twitter Copy Link Print
Previous Article ಅಭಿಮಾನಿಗಳ ಮುಂದೆ ಶಾರುಖ್‌ ಖಾನ್‌ ಪುತ್ರನಿಂದ ಅಸಭ್ಯ ವರ್ತನೆ
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ 05-12-2025,‌ ಶುಕ್ರವಾರ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?