Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಖ್ಯಾತ ಸ್ತ್ರೀ ರೋಗ ತಜ್ಞೆ ಮತ್ತು ಅವರ ಪುತ್ರ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಹೊಮ್ಮರಡಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್ (34) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಮನೆಯ ಕೆಳಭಾಗದಲ್ಲಿ ಡಾ. ಜಯಶ್ರೀ ಅವರು ನೇಣು ಬಿಗಿದುಕೊಂಡಿದ್ದರೆ, ಮೊದಲ ಮಹಡಿಯಲ್ಲಿ ಅಕಾಶ್ ನೇಣಿಗೆ ಶರಣಾಗಿದ್ದಾರೆ.
ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಕೂಡ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಆಕಾಶ್ ಹೊಮ್ಮರಡಿ ಅವರ ಪತ್ನಿ ನವ್ಯಶ್ರೀ ಕೂಡ ಒಂದೂವರೆ ವರ್ಷದ ಹಿಂದೆ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಡಾ.ಜಯಶ್ರೀ ನೆಲ ಮಹಡಿಯ ಕೊಠಡಿಲ್ಲಿ ನೇಣು ಬಿಗಿದುಕೊಂಡಿದ್ದು, ಆಕಾಶ್ ಶವ ಮೊದಲ ಮಹಡಿ ಕೊಠಡಿಯಲ್ಲಿ ಪತ್ತೆಯಾಗಿದೆ. ಆಕಾಶ್ ಅವರಿಗೆ ಕಳೆದ ಮೇ ತಿಂಗಳಲ್ಲಿ ಮತ್ತೊಂದು ಮದುವೆ ಆಗಿತ್ತು. ಆಕಾಶ್ ಪತ್ನಿ ಮತ್ತೊಂದು ಕೊಠಡಿಯಲ್ಲಿ ಇದ್ದರು ಎಂದು ತಿಳಿದುಬಂದಿದೆ.
‘ಸೊಸೆ ನವ್ಯಶ್ರೀ ಸಾವಿನಿಂದ ಕುಟುಂಬ ಬೇಸರಕ್ಕೆ ಒಳಗಾಗಿತ್ತು ಎಂಬುದು ಸ್ಥಳದಲ್ಲಿ ದೊರೆತ ಡೆತ್ನೋಟ್ನಲ್ಲಿ ವ್ಯಕ್ತವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ವಿನೋಬ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ
ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದ ಗಾಂಧಿ ನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು.
25 ಲಕ್ಷ ಸ್ಯಾಲರಿ ಕೆಲ್ಸ ಬಿಟ್ಟು ಡೆಲಿವರಿ ಬಾಯ್ ಆದ ವ್ಯಕ್ತಿ; ಕಾರಣವೇನು?