Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Panchakshari salimath ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಹಾವೇರಿ ಲೋಕಾಯುಕ್ತ ಸಿಪಿಐ ಸಾಲಿಮಠ ಸಜೀವ ದಹನ
ಕರ್ನಾಟಕಪ್ರಮುಖ

Panchakshari salimath ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಹಾವೇರಿ ಲೋಕಾಯುಕ್ತ ಸಿಪಿಐ ಸಾಲಿಮಠ ಸಜೀವ ದಹನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಧಾರವಾಡ: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ.

ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಕಾರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ.

ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಕಾರ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಡಿಕ್ಕಿ ಹೊಡೆದ ರಭಸಕ್ಕೆ ಕೆಲವೇ ಕ್ಷಣದಲ್ಲಿ ಬೆಂಕಿ ಆವರಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಕಾರು ಸುಟ್ಟುಹೋಗಿದೆ.

ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನ ಭದ್ರಾಪುರ ಬಳಿಯ (ಗದಗ-ಹುಬ್ಬಳ್ಳಿ ಹೆದ್ದಾರಿ) ಅರೆರಾ ಸೇತುವೆ ಸಮೀಪ ಕಾರು ರಸ್ತೆಯ ವಿಭಜಕಕ್ಕೆ ಡಿಕ್ಕಿಯಾಗಿದೆ. ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರ್‌ ಪ್ರಯಾಣ ಮಾಡುವಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಭೀಕರ ಘಟನೆ ನಡೆದಿದೆ.

ಸಂಜೆ 7.30ರ ಸುಮಾರಿಗೆ ಘಟನೆ ನಡೆದಿದ್ದು, ಕಾರಿಗೆ ಬೆಂಕಿ ಹೊತ್ತಿಕೊಳ್ಳುವ ವೇಳೆ ಹಾವೇರಿಯಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಪಂಚಾಕ್ಷರಿ ಸಾಲಿಮಠ ಅವರೇ ಡ್ರೈವ್‌ ಮಾಡುತ್ತಿದ್ದರು.

ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಅವರು ಹೊರಟಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೃತದೇಹ ಸುಟ್ಟು ಕರಕಲಾಗಿದ್ದರಿಂದ ಪತ್ತೆ ಹಚ್ಚುವುದು ಕಷ್ಟವಾಗಿತ್ತು. ಈ ವೇಳೆ ಅವರ ಕುಟುಂಬ ಪಂಚಾಕ್ಷರಿ ಸಾಲಿಮಠ ಅವರ ಗುರುತು ಪತ್ತೆ ಮಾಡಿದೆ. ಕೈಯಲ್ಲಿದ್ದ ಬ್ರೆಸ್ಲೆಟ್ ನೋಡಿ ಪತ್ತೆ ಮಾಡಲಾಗಿದೆ. ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಕೆಳಗೆ ಬಿದ್ದಾಗ ಏಕಾಎಕಿ ಬೆಂಕಿ‌ ಹೊತ್ತಿದೆ. ಪೆಟ್ರೋಲ್ ಲೀಕ್ ಆದ ಕಾರಣ ಸ್ಪಾರ್ಕ್ ಆಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಟ್ಟ ಹುಡುಗಿಯನ್ನು ಜೋಪಾನವಾಗಿ ಶಾಲೆಗೆ ಬಿಟ್ಟು ಬಂದ ಮರಿಯಾನೆ; ವೈರಲ್ ವಿಡಿಯೋ ನೋಡಿ

TAGGED:Car catches fire after hitting divider: Haveri Lokayukta CPI Salimath burnt alive
Share This Article
Facebook Twitter Copy Link Print
Previous Article ಪುಟ್ಟ ಹುಡುಗಿಯನ್ನು ಜೋಪಾನವಾಗಿ ಶಾಲೆಗೆ ಬಿಟ್ಟು ಬಂದ ಮರಿಯಾನೆ; ವೈರಲ್ ವಿಡಿಯೋ ನೋಡಿ
Next Article Putin returns ಭಾರತ ಪ್ರವಾಸ ಮುಗಿಸಿ ರಷ್ಯಾಗೆ ಮರಳಿದ ಪುಟಿನ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?