Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತಾಂತರ ಮತ್ತು ಕೊಲೆ ಬೆದರಿಕೆ; ವಿವಾಹಿತ ಮಹಿಳೆ ಆತ್ಮಹತ್ಯೆ
ಕರ್ನಾಟಕಪ್ರಮುಖ

ಮತಾಂತರ ಮತ್ತು ಕೊಲೆ ಬೆದರಿಕೆ; ವಿವಾಹಿತ ಮಹಿಳೆ ಆತ್ಮಹತ್ಯೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಮತ್ತು ಅನೈತಿಕ ಸಂಬಂಧವನ್ನು ಮುಂದುವರಿಸುವಂತೆ ವ್ಯಕ್ತಿಯೊಬ್ಬ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಗೋಣಗನೂರ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ನಾಗವ್ವ ದೇಮಪ್ಪ ವಂಟಮೂರಿ (28) ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬಸ್ಥರು ಗ್ರಾಮದ ಮಕ್ತುಮಸಾಬ್ ಪಾಟೀಲ್ ಎಂಬ ವ್ಯಕ್ತಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಾಗವ್ವ ಅವರು ಮಕ್ತುಮಸಾಬ್‌ನ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ. ಮಕ್ತುಮಸಾಬ್ ಪಾಟೀಲ್, ನಾಗವ್ವ ಅವರಿಗೆ ‘ನೀನು ಹಿಂದೂ ಧರ್ಮದಲ್ಲಿ ಯಾಕೆ ಇರುತ್ತೀಯಾ, ನಮ್ಮ ಮುಸ್ಲಿಂ ಧರ್ಮಕ್ಕೆ ಬಾ’ ಎಂದು ನಿರಂತರವಾಗಿ ಧಮಕಿ ಹಾಕುತ್ತಿದ್ದ ಎನ್ನಲಾಗಿದೆ. ಒಂದು ವೇಳೆ ಮತಾಂತರವಾಗದಿದ್ದರೆ, ‘ನಿನ್ನನ್ನು ಕೊಲೆ ಮಾಡುತ್ತೇನೆ’ ಎಂದು ಜೀವ ಬೆದರಿಕೆ ಹಾಕುತ್ತಿದ್ದ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತೆ ನಾಗವ್ವ ಅವರಿಗೆ ಒಂಭತ್ತು ವರ್ಷಗಳ ಹಿಂದೆ ದೇಮಪ್ಪ ಎಂಬುವರೊಂದಿಗೆ ಮದುವೆಯಾಗಿತ್ತು. ಮದುವೆಯಾದ ಸುಮಾರು 1 ವರ್ಷದ ಬಳಿಕ ನಾಗವ್ವ ಅವರಿಗೆ ಮಕ್ತುಮಸಾಬ್ ಪಾಟೀಲ್‌ನ ಪರಿಚಯವಾಗಿತ್ತು. ಈ ಪರಿಚಯವು ಕ್ರಮೇಣ ಅನೈತಿಕ ಸಂಬಂಧಕ್ಕೆ ಮಾರ್ಪಟ್ಟಿತ್ತು. ಈ ಅನೈತಿಕ ಸಂಬಂಧದ ವಿಚಾರ ನಾಗವ್ವ ಅವರ ಮನೆಯವರಿಗೆ ತಿಳಿದು ಬಂದಾಗ, ಅವರು ಬೈದು ಬುದ್ಧಿವಾದ ಹೇಳಿದ್ದರು. ಮನೆಯವರ ಸೂಚನೆ ಮತ್ತು ಎಚ್ಚರಿಕೆಯ ಮೇರೆಗೆ ನಾಗವ್ವ ಮಕ್ತುಮಸಾಬ್‌ನ ಸಹವಾಸವನ್ನು ಬಿಟ್ಟಿದ್ದರು.

ನಾಗವ್ವ ಅವರು ಮಕ್ತುಮಸಾಬ್‌ನಿಂದ ದೂರವಾದ ಬಳಿಕ, ಆತ ಅವರ ಮನೆಗೆ ಹೋಗಿ ನಿರಂತರವಾಗಿ ಧಮಕಿ ಹಾಕಿ ಕಿರುಕುಳ ನೀಡಲು ಪ್ರಾರಂಭಿಸಿದ್ದನು. ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ, ಸಂಬಂಧ ಮುಂದುವರಿಸುವಂತೆ ಮತ್ತು ಜೀವ ಬೆದರಿಕೆ ಹಾಕುತ್ತಿದ್ದ ಮಕ್ತುಮಸಾಬ್‌ನ ಕಿರುಕುಳ ತಾಳಲಾರದೆ ನಾಗವ್ವ ಅವರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಈ ಸಾವಿಗೆ ಮಕ್ತುಮಸಾಬ್ ಪಾಟೀಲ್‌ನ ಕಿರುಕುಳವೇ ನೇರ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇನ್ನು ಘಟನೆ ನಡೆದ ಸ್ಥಳಕ್ಕೆ ಕಟಕೋಳ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಶವಾಗಾರಕ್ಕೆ ಸಾಗಿಸಲಾಗಿದ್ದು, ಕುಟುಂಬಸ್ಥರ ದೂರಿನ ಮೇರೆಗೆ ಕಟಕೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಕೇಸ್‌: ಡಿ.ಕೆ. ಶಿವಕುಮಾರ್‌ಗೆ ದೆಹಲಿ ಪೊಲೀಸರಿಂದ ನೋಟಿಸ್‌

TAGGED:Married woman commits suicide after being harassed by man to convert to Islam
Share This Article
Facebook Twitter Copy Link Print
Previous Article ಮಾರ್ಕ್‌ ಜುಕರ್‌ಬರ್ಗ್‌ ದಾಖಲೆ ಮುರಿದು ಬರೀ 22 ವರ್ಷಕ್ಕೆ ಕೋಟ್ಯಧಿಪತಿಯಾದ ಭಾರತದ 22 ವರ್ಷದ ಆದರ್ಶ್ ಹಿರೇಮಠ
Next Article ನ್ಯಾಷನಲ್‌ ಹೆರಾಲ್ಡ್‌ ಕೇಸ್‌: ಡಿ.ಕೆ. ಶಿವಕುಮಾರ್‌ಗೆ ದೆಹಲಿ ಪೊಲೀಸರಿಂದ ನೋಟಿಸ್‌

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?