Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಳೆ ರಾತ್ರಿ 8 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ
ದೇಶಪ್ರಮುಖ

ನಾಳೆ ರಾತ್ರಿ 8 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಂಡಿಗೋ ವಿಮಾನ ಸಂಸ್ಥೆಯ ಎಡವಟ್ಟಿನಿಂದ ಪ್ರಯಾಣಿಕರು ಸಂಕಷ್ಟಕ್ಕೆ ಒಳಲಾಗಿದ್ದರು. ಇದೀಗ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇಂಡಿಗೋ ಏರ್ಲೈನ್ಸ್ ವಿಮಾನಗಳ ಹಾರಾಟ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕರಿಗೆ ಬಾಕಿ ಹಣ ಪಾವತಿಸಿದ ಇಂಡಿಗೋ ಏರ್ಲೈನ್ಸ್ಗೆ ಖಡಕ್ ಸಂದೇಶವನ್ನು ಕೇಂದ್ರ ವಿಮಾನಯಾನ ಸಚಿವಾಲಯವು ನೀಡಿದೆ.

ನಾಳೆ ರಾತ್ರಿ 8 ಗಂಟೆಯೊಳಗೆ ಬಾಕಿ ಹಣವನ್ನು ಮರುಪಾವತಿಸುವಂತೆ ಸೂಚನೆ ನೀಡಿದೆ. ಒಂದು ವೇಳೆ ಮರುಪಾವತಿ ಮಾಡದಿದ್ದರೆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ. ಇದರ ಜತೆಗೆ ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ಇತರ ವಿಮಾನಗಳ ಟಿಕೆಟ್‌ ದರ ಹೆಚ್ಚಳ ಮಾಡಲಾಗಿದೆ. ಅದಕ್ಕಾಗಿ ಈ ಬಿಕ್ಕಟ್ಟು ಪರಿಹಾರ ಆಗುವವರೆಗೆ ವಿಮಾನಯಾನ ಸಚಿವಾಲಯ ಎಲ್ಲಾ ಏರ್‌ಲೈನ್ಸ್‌ಗಳಿಗೆ ಅನ್ವಯವಾಗುವಂತೆ ಏಕರೂಪ ದರ ನಿಗದಿ ಮಾಡಿದೆ.

ಕೇಂದ್ರ ವಿಮಾನಯಾನ ಸಚಿವಾಲಯವು ಎಲ್ಲಾ ಏರ್‌ಲೈನ್ಸ್‌ಗಳಿಗೆ ಅನ್ವಯವಾಗುವಂತೆ ಬೆಲೆಯೊಂದನ್ನು ನಿಗದಿ ಮಾಡಿದೆ. 500-1000 ಕಿ.ಮೀ.ವರೆಗೆ ಗರಿಷ್ಠ 12 ಸಾವಿರ ರೂಪಾಯಿ ದರ ಇರಬೇಕು. ಹಾಗೂ 1000-1500 ಕಿ.ಮೀ.ವರೆಗೆ ಗರಿಷ್ಠ 15 ಸಾವಿರ ರೂಪಾಯಿ ದರ ಇರಬೇಕು ಎಂದು ಹೇಳಿದೆ. ಈ ನಿಗದಿಪಡಿಸಿದ ಟಿಕೆಟ್‌ ದರಕ್ಕಿಂತ ಹೆಚ್ಚಿನ ಹಣ ಪಡೆಯದಂತೆ ಸೂಚನೆ. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ. ಇದರ ಜತೆಗೆ ಸಚಿವಾಲಯವು ಇಂಡಿಗೋ ಏರ್ಲೈನ್ಸ್ ವಿಮಾನಗಳ ಹಾರಾಟ ರದ್ದಾಗಿರುವುದಕ್ಕೆ ಕಾರಣ ಏನು ಎಂಬುದನ್ನು ತಿಳಿಸಿ ಎಂದು ಇಂಡಿಗೋ ಏರ್ಲೈನ್ಸ್ ಅಧಿಕಾರಿಗಳಿಗೆ ಸೂಚನೆಯನ್ನು ಕೂಡ ನೀಡಿದೆ. ಸಂಜೆ 6 ಗಂಟೆಗೆ ಸಚಿವಾಲಯಕ್ಕೆ ಬರುವಂತೆ ಅಧಿಕಾರಿಗಳಿಗೆ ಸಮನ್ಸ್‌ ನೀಡಲಾಗಿತ್ತು.ಇದೀಗ ಇಂಡಿಗೋ ವಿಮಾನ ಸಂಸ್ಥೆಯ ಅಧಿಕಾರಿಗಳು ವಿಮಾನಯಾನ ಸಚಿವಾಲಯಕ್ಕೆ ಭೇಟಿ ನೀಡಿದ್ದಾರೆ. ಇನ್ನು ಕೆಲವೇ ಕ್ಷಣದಲ್ಲಿ ಇಂಡಿಗೋ ವಿಮಾನ ಸಂಸ್ಥೆಯ ಅಧಿಕಾರಿಗಳ ಜತೆಗೆ ಸಭೆ ನಡೆಯಲಿದೆ.

ರದ್ದಾದ ವಿಮಾನಗಳ ಪ್ರಯಾಣಿಕರಿಗೆ ಹಣ ವಾಪಸ್ ಮಾಡುವುದರ ಜತೆಗೆ ಲಗೇಜ್ ಹಾಗೂ ವಸ್ತುಗಳನ್ನು ಸುರಕ್ಷಿತವಾಗಿ ಪ್ರಯಾಣಿಕರಿಗೆ 48 ಗಂಟೆಯೊಳಗೆ ತಲುಪಿಸುವಂತೆ ಆದೇಶ ನೀಡಿದೆ. ಕಳೆದ ಐದು ದಿನಗಳಿಂದ ಇಂಡಿಗೋ ವಿಮಾನ ರದ್ದಾಗಿತ್ತು. ಹಾರಾಟ ರದ್ದಿನಿಂದ ಹಣ ನೀಡಿ ಟಿಕೆಟ್ ಖರೀದಿಸಿದ್ದ ಪ್ರಯಾಣಿಕರು ಪರದಾಡಿದ್ರು, ಹೀಗಾಗಿ ಬುಕ್ ಆಗಿದ್ದ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡವರಿಗೆ ಹಣ ವಾಪಸ್ ಆಗಿರಲಿಲ್ಲ. ಇದೀಗ ಈ ಗೊಂದಲಕ್ಕೆ ಸರ್ಕಾರ ಹಸ್ತಕ್ಷೇಪ ಮಾಡಿದ್ದು, ನಾಳೆ ರಾತ್ರಿ 8 ಗಂಟೆಯೊಳಗೆ ಹಣ ನೀಡುವಂತೆ. ಹಾಗೂ ಮರು ಬುಕ್ಕಿಂಗ್ ಮಾಡಿಕೊಳ್ಳುವವರಿಗೆ ಯಾವುದೇ ಶುಲ್ಕವಿಲ್ಲದೆ ಟಿಕೆಟ್ ಬುಕ್ ಮಾಡಿಕೊಡುವಂತೆ ಆದೇಶ ನೀಡಿದೆ.

https://x.com/MoCA_GoI/status/1997221656624853202?ref_src=twsrc%5Etfw%7Ctwcamp%5Etweetembed%7Ctwterm%5E1997221656624853202%7Ctwgr%5Eff89a2df6377383f8577be27c84619e032a1eb0e%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಮದುವೆ ಮೆರವಣಿಗೆಯಲ್ಲಿ ಗನ್ ಸದ್ದು

TAGGED:Centre asks IndiGo to refund dues by 8 pm tomorrow
Share This Article
Facebook Twitter Copy Link Print
Previous Article ಮದುವೆ ಮೆರವಣಿಗೆಯಲ್ಲಿ ಗನ್ ಸದ್ದು
Next Article ಕಿಚ್ಚ ಸುದೀಪ್‌ ʼಮಾರ್ಕ್‌ʼ ಟ್ರೇಲರ್‌ ರಿಲೀಸ್‌ಗೆ ಡೇಟ್‌, ಟೈಮ್‌ ಫಿಕ್ಸ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?