Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSCA ಅಧ್ಯಕ್ಷರಾಗಿ ಗೆದ್ದು ಬೀಗಿದ ವೆಂಕಿ, 12 ವರ್ಷ ಬಳಿಕ ಮತ್ತೆ ಅಧಿಕಾರ
ಕರ್ನಾಟಕದೇಶಪ್ರಮುಖ

KSCA ಅಧ್ಯಕ್ಷರಾಗಿ ಗೆದ್ದು ಬೀಗಿದ ವೆಂಕಿ, 12 ವರ್ಷ ಬಳಿಕ ಮತ್ತೆ ಅಧಿಕಾರ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (KSCA) ಅಧ್ಯಕ್ಷ ಚುನಾವಣೆಯಲ್ಲಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್‌ ಗೆಲುವು ಸಾಧಿಸಿದ್ದಾರೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸೇರಿ ಒಟ್ಟು 16 ಸ್ಥಾನಗಳಿಗೆ ಭಾನುವಾರ (ಡಿಸೆಂಬರ್ 7) ಬೆಳಗ್ಗೆಯಿಂದ ಸಂಜೆವರೆಗೆ ಮತದಾನ ನಡೆದಿದ್ದು, ವೆಂಕಟೇಶ್ ಪ್ರಸಾದ್‌ 191 ಮತಗಳ ಅಂತರ ಗೆದ್ದು ಬೀಗಿದ್ದಾರೆ.

ಇದರೊಂದಿಗೆ ವೆಂಕಟೇಶ್ ಪ್ರಸಾದ್ 12 ವರ್ಷಗಳ ಬಳಿಕ ಮತ್ತೆ ಅಧ್ಯಕ್ಷರಾಗಿ ಕೆಎಸ್‌ಸಿಎಗೆ ವಾಪಸ್ಸಾಗಿದ್ದಾರೆ.

ಮಾಜಿ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್ ಹಾಗೂ ಅನಿಲ್ ಕುಂಬ್ಳೆ ಬಣದ ವೆಂಕಟೇಶ್ ಪ್ರಸಾದ್‌ಗೆ ಒಟ್ಟು 749 ಮತಗಳು ಬಿದ್ದಿದ್ದರೆ, ಬ್ರಿಜೇಶ್ ಪಟೇಲ್ ಬಣದ ಶಾಂತಕುಮಾರ್‌ಗೆ 558 ಮತಗಳು ಲಭಿಸಿವೆ.

ಇದರೊಂದಿಗೆ ವೆಂಕಟೇಶ್ ಪ್ರಸಾದ್‌ 191 ಮತಗಳ ಅಂತರದಿಂದ ವಿರೋಧಿ ಶಾಂತಕುಮಾರ್‌ ಅವರನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವೆಂಕಟೇಶ್ ಪ್ರಸಾದ್ ಬಣದಿಂದ ಸುಜಿತ್ ಸೋಮಸುಂದರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ಮಧುಕರ್ ಅವರು ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

ಕೆಎಸ್‌ಸಿಎ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೆನನ್ ಗೆಲುವು ಸಾಧಿಸಿದ್ದಾರೆ. ಈ ಬಾರಿ ಒಟ್ಟು 1315 ಮತಗಳು ಚಲಾವಣೆಯಾಗಿವೆ. 2013ರಲ್ಲಿ 1351 ಮತಗಳು ಚಲಾವಣೆಗೊಂಡಿದ್ದವು. ಕೆಎಸ್ಸಿಎ ಇತಿಹಾಸದಲ್ಲಿ 2013ರಲ್ಲೇ ಅತಿ ಹೆಚ್ಚು ಮತದಾನವಾಗಿತ್ತು.

ಪರಾಜಿತ ಅಭ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ವೆಂಕಟೇಶ್ ಪ್ರಸಾದ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಶಾಂತಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದು, ಶಾಂತಕುಮಾರ್ ಅವರ ನಾಮಪತ್ರ ಸಿಂಧುಗೊಳಿಸಿ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು. ಅದರಂತೆ ಭಾನುವಾರ ನಡೆದ ಚುನಾವಣೆಯಲ್ಲೂ ವೆಂಕಟೇಶ್ ಪ್ರಸಾದ್ ಗೆದ್ದು ಬೀಗಿದ್ದಾರೆ.

ವೆಂಕಟೇಶ್‌ ಈ ಹಿಂದೆ 2010ರಿಂದ 2013ರವರೆಗೆ ಕೆಎಸ್‌ಸಿಎ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆಗ ಅನಿಲ್‌ ಕುಂಬ್ಳೆ ಅಧ್ಯಕ್ಷರಾಗಿದ್ದರು. ಜಾವಗಲ್‌ ಶ್ರೀನಾಥ್‌ ಕಾರ್ಯದರ್ಶಿಯಾಗಿದ್ದರು. ಇದೀಗ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ‌ 12 ವರ್ಷಗಳ ಬಳಿಕ ಮತ್ತೆ ಕೆಎಸ್‌ಸಿಎಗೆ ಮರಳಿದ್ದಾರೆ.

1994ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ವೆಂಕಿ, ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. 33 ಟೆಸ್ಟ್ ಪಂದ್ಯದಿಂದ 96 ವಿಕೆಟ್ ಕಬಳಿಸಿದ್ದರೆ, 161 ಏಕದಿನ ಪಂದ್ಯದಿಂದ 196 ವಿಕೆಟ್ ಉರುಳಿಸಿದ್ದಾರೆ.

Longest car ವಿಶ್ವದ ಅತಿ ಉದ್ದನೆಯ ಕಾರಿನ ಬಗ್ಗೆ ತಿಳಿದಿದೆಯೇ?

ಮಾರ್ಕ್ ಡಿಸ್ಟ್ರಿಬ್ಯೂಷನ್ ಪಡೆದ ಪ್ರಿಯಾ ಸುದೀಪ್

TAGGED:returns to power after 12 yearsVenky wins KSCA chairmanship
Share This Article
Facebook Twitter Copy Link Print
Previous Article ಮಲಗಿದ ತಕ್ಷಣ ಒಳ್ಳೆ ನಿದ್ದೆ ಬರ್ಬೇಕು ಅಂದ್ರೆ ಈ ರೀತಿ ಮಾಡಿ ಸಾಕು
Next Article Sexual Health ದೈಹಿಕ ಸಂಪರ್ಕ ನಂತರದ ರಕ್ತಸ್ರಾವ ನಿರ್ಲಕ್ಷಿಸದಿರಿ, ಇದು ಅಪಾಯದ ಲಕ್ಷಣವೂ ಆಗಿರಬಹುದು!

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?