Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ ಸಾಕಾನೆಯೊಂದು ಸೋಮವಾರ ರಾತ್ರಿ ಸಾವಿಗೀಡಾಗಿದೆ.
ಕಳೆದ ವರ್ಷ ಡಿ.28 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಆನೆಯೊಂದನ್ನು ಸೆರೆಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಕರೆತರಲಾಗಿತ್ತು.
‘ತಕ್ಷ’ ಎಂಬ ಹೆಸರಿನ ಈ ಆನೆಯನ್ನು ಜು.21ರಂದು ಕ್ರಾಲ್‌ನಿಂದ ಹೊರ ಬಿಡಲಾಗಿತ್ತು.
ಕಳೆದ 10 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಕ್ಷ ಆನೆಯ ಆರೋಗ್ಯದಲ್ಲಿ ಡಿ.6ರಿಂದ ತೀವ್ರ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿ ಡಾ. ಮುಜೀಬ್ ಅವರಿಂದ ಚಿಕಿತ್ಸೆಗೆ ಒಳಪಡಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ 9.30 ರ ಸಮಯದಲ್ಲಿ ಸಾಕಾನೆ ಸಾವನ್ನಪ್ಪಿದೆ.
ಮಂಗಳವಾರ, ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವಿ. ಅವರ ಉಪಸ್ಥಿತಿಯಲ್ಲಿ ಪಶು ವೈದ್ಯಾಧಿಕಾರಿಗಳಾದ ಡಾ.ಮುಜೀಬ್, ಡಾ. ಚಿಟ್ಟಿಯಪ್ಪ ಹಾಗೂ ಡಾ. ಸಂಜೀವ್ ಕುಮಾರ್ ಸಿಂಧೆ ಅವರುಗಳು ಮರಣೋತ್ತರ ಪರೀಕ್ಷೆ ನಡೆಸಿದ್ದು, ಆನೆಯ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.