Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Weather report ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಚಳಿ, ಶೀತ ಅಲೆಯ ಎಚ್ಚರಿಕೆ
ಕರ್ನಾಟಕಪ್ರಮುಖ

Weather report ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಚಳಿ, ಶೀತ ಅಲೆಯ ಎಚ್ಚರಿಕೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕರ್ನಾಟಕದಲ್ಲಿ ತಾಪಮಾನ ಮತ್ತಷ್ಟು ಇಳಿಕೆ ಆಗಿದ್ದು, ಚಳಿ ಪ್ರಮಾಣ ಹೆಚ್ಚಾಗುತ್ತಿದೆ. ಮಂಗಳವಾರ ಬೀದರ್ ಜಿಲ್ಲೆಗೆ ಶೀತದ ಅಲೆ ಎಚ್ಚರಿಕೆ ನೀಡಲಾಗಿತ್ತು. ಇದೀಗ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಿಗೆ ಶೀತದ ಅಲೆ ಎಚ್ಚರಿಕೆ ನೀಡಲಾಗಿದೆ. ಇತರ ಜಿಲ್ಲೆಗಳಲ್ಲೂ ಬೆಳಗ್ಗೆ, ರಾತ್ರಿ ದಟ್ಟ ಮಂಜು ಆವರಿಸಲಿದೆ.

ತಂಪು ವಾತಾವರಣ ಹೆಚ್ಚಾಗಲಿದೆ. ರಾಜ್ಯಾದ್ಯಂತ ಒಣಹವೆ, ಹಗಲು ಉರಿ ಬಿಸಿಲು ದಾಖಲಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕ ಕೇಂದ್ರ ಮುನ್ಸೂಚನೆ ನೀಡಿದೆ.

ಮುಂದಿನ ಮೂರು ದಿನ ವಾತಾವರಣದಲ್ಲಿ ಶೀತದ ಅಲೆಗಳ ಪ್ರಭಾವ ಹೆಚ್ಚಿರಲಿದೆ. ಇಡೀ ರಾಜ್ಯದಲ್ಲಿ ತಂಪು ವಾತಾವರಣವು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಾಗಿರಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಕಲಬುರಗಿ, ಧಾರವಾಡ, ಗದಗ, ಹಾವೇರಿ ಸೇರಿದಂತೆ ಪ್ರತ್ಯೇಕ ಪ್ರದೇಶಗಳಲ್ಲಿ ಶೀತ ಅಲೆಯ ಎಚ್ಚರಿಕೆ ನೀಡಲಾಗಿದೆ. ಇಲ್ಲಿ ಬೆಳಗ್ಗೆ ಮಂಜಿನ ವಾತಾವರಣ ಸಹಿತ ಚಳಿ ಹೆಚ್ಚಿರಲಿದೆ. ಉಳಿದಂತೆ ಮಧ್ಯಾಹ್ನದಿಂದ ಸಂಜೆವರೆಗೆ ಒಣಹವೆಯು ನಿರ್ಮಾಣವಾಗಲಿದೆ.

ಕರಾವಳಿ ಭಾಗದ ಮೂರು ಜಿಲ್ಲೆಗಳು, ಮಲೆನಾಡಿನ ಭಾಗ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಜತೆ ಹೆಚ್ಚಿನ ಚಳಿ ಆವರಿಸಲಿದೆ. ಕನಿಷ್ಠ ತಾಪಮಾನದಲ್ಲಿ ಬದಲಾವಣೆ ಆಗಲಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರ ಮೇಲ್ಮೈನಲ್ಲಿನ ಕಡಿಮೆ ಒತ್ತಡದ ಪ್ರದೇಶವು ದುರ್ಬಲಗೊಂಡ ಹಿನ್ನೆಲೆಯಲ್ಲಿ ಸ್ಪಷ್ಟ ನೀಲಿ ಆಕಾಶ ಇರಲಿದೆ. ಈ ವೇಳೆ ಮಧ್ಯಾಹ್ನ ಗರಿಷ್ಠ ತಾಪಮಾನ ನಿರೀಕ್ಷೆ ಇದೆ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕಕ್ಕೆ ಸೀಮಿತವಾಗಿರುವ ಶೀತದ ಅಲೆಗಳು ಬೆಂಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ವಿಸ್ತರಿಸಲೂ ಬಹುದು.

ಬೆಂಗಳೂರಿನಲ್ಲಿ ಮಬ್ಬು ಕವಿದ ವಾತಾವರಣ ಮರೆಯಾಗಿದೆ. ಸ್ವಚ್ಛ ಆಕಾಶ ಕಂಡುಬಂದಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು, ಚಳಿ ಏರಿಕೆಯ ಸಾಧ್ಯತೆ ಇದೆ. ಇಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ನಿರೀಕ್ಷೆ ಇದೆ.

ಬಂಗಾಳಕೊಲ್ಲಿಯಲ್ಲಿ ವೈಪರೀತ್ಯ ಉಂಟಾಗಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಮಂಗಳೂರು, ದಕ್ಷಿಣ ಕನ್ನಡ ಭಾಗಗಳಲ್ಲಿ ಮಳೆ ಬರುವ ನಿರೀಕ್ಷೆ ಇದೆ ಎನ್ನಲಾಗಿದೆ. ಆದರೆ ಮಳೆ ಬರುವಿಕೆ ಬಗ್ಗೆ ಐಎಂಡಿ ಖಚಿತಪಡಿಸಿಲ್ಲ.

ಈ‌ ಜೋಡಿಯ ವಿಚ್ಛೇದನಕ್ಕೆ ಕಾರಣವಾಯ್ತು ಈರುಳ್ಳಿ- ಬೆಳ್ಳುಳ್ಳಿ, 11 ವರ್ಷದ ಸಂಸಾರಕ್ಕೇನಾಯ್ತು?

ಮಗಳನ್ನು ಅಸಭ್ಯವಾಗಿ ಮುಟ್ಟಿದ್ದಕ್ಕೆ ಲಿವ್ ಇನ್ ಪಾರ್ಟ್‌ನರ್‌‌ನನ್ನು ಕೊಂದ ಎರಡು ಮಕ್ಕಳ ತಾಯಿ

TAGGED:Severe cold wave warning for 3 more days in the state
Share This Article
Facebook Twitter Copy Link Print
Previous Article ಕೌಟುಂಬಿಕ ಜಗಳಕ್ಕೆ 6 ತಿಂಗಳ ಮಗುವನ್ನೇ ಕಿಡ್ನ್ಯಾಪ್ ಮಾಡಿದ ತಂದೆ.!
Next Article ನಾಳೆ ಡೆವಿಲ್ ಚಿತ್ರ ರಿಲೀಸ್ : ಜೈಲಿನಿಂದಲೇ ಅಭಿಮಾನಿಗಳಿಗೆ ಸಂದೇಶ ರವಾನಿಸಿದ ನಟ ದರ್ಶನ್.!

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?