Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > menstrual leave ಮುಟ್ಟಿನ ರಜೆ ಕೊಡದಿದ್ದರೆ ಐದು ಸಾವಿರ ರೂ. ದಂಡ ಸಾಧ್ಯತೆ: ಸರ್ಕಾರದಿಂದ ಮಸೂದೆ, ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
ಕರ್ನಾಟಕಪ್ರಮುಖ

menstrual leave ಮುಟ್ಟಿನ ರಜೆ ಕೊಡದಿದ್ದರೆ ಐದು ಸಾವಿರ ರೂ. ದಂಡ ಸಾಧ್ಯತೆ: ಸರ್ಕಾರದಿಂದ ಮಸೂದೆ, ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

Share
4 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ಮುಟ್ಟಿನ ರಜೆ ನೀಡುವುದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುವ, ಮುಟ್ಟು ಆದವರನ್ನು ಕೆಟ್ಟದಾಗಿ ನಡೆಸಿಕೊಳ್ಳುವ, ತಾರತಮ್ಯ ಮಾಡುವ ಅಥವಾ ಅಸ್ಪೃಶ್ಯ ಎಂದು ಪರಿಗಣಿಸುವವರಿಗೆ ₹ 5 ಸಾವಿರದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಉದ್ದೇಶದಿಂದ ‘ಕರ್ನಾಟಕ ಮಹಿಳಾ ಯೋಗಕ್ಷೇಮ ರಜೆ ಕಾಯ್ದೆ- 2025’ರ ಕರಡು ಮಸೂದೆಯನ್ನು ಸರ್ಕಾರ ಸಿದ್ಧಪಡಿಸಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ.

ರಾಜ್ಯ ಸರ್ಕಾರದ ಅಧೀನದ ಶಿಕ್ಷಣ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸೇವೆಗಳಲ್ಲಿ ತೊಡಗಿರುವ ಮಹಿಳೆಯರು ಮುಟ್ಟಾದರೆ, ಆ ಅವಧಿಯಲ್ಲಿ ಪ್ರಯೋಜನಗಳನ್ನು ಒದಗಿಸುವ ಉದ್ದೇಶದಿಂದ ಈ ಮಸೂದೆಯನ್ನು ರೂಪಿಸಲಾಗಿದೆ. ಮಸೂದೆಯ ಅನ್ವಯ ಹುಡುಗಿಯರು, ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಮುಟ್ಟಿನ ರಜೆ ಪಡೆಯಲು ಅರ್ಹರು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ.

ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಮುಟ್ಟಿನ ರಜೆಯನ್ನು ಮಂಜೂರು ಮಾಡಿ ಈಗಾಗಲೇ ಸರ್ಕಾರ ಆದೇಶ ಹೊರಡಿಸಿದೆ. ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ. ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಮುಟ್ಟಿನ ರಜೆ ಪಡೆಯಬಹುದು ಎಂದೂ ಈ ಆದೇಶದಲ್ಲಿ ವಿವರಿಸಿದೆ. ಈ ಆದೇಶಕ್ಕೆ ಕಾನೂನು ಬಲ ನೀಡಲು ಕಾಯ್ದೆ ರೂಪಿಸಲಾಗುತ್ತಿದೆ ಎಂದೂ ಮೂಲಗಳು ತಿಳಿಸಿವೆ.

ಮುಟ್ಟಿನ ಸಮಯದಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಿದರೆ ಮಾತ್ರ ಮುಟ್ಟು ಆದವರು ಮುಟ್ಟಿನ ರಜೆ ಪಡೆಯಬಹುದು. ಆದರೆ, ಅದಕ್ಕೆ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಲ್ಲ. ಏಕೆಂದರೆ, ಅದರಿಂದ ವಿಳಂಬ ಆಗಬಹುದು. ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ರಜೆ ನೀಡುವಂತೆ ವಿನಂತಿ ಅಥವಾ ಇ-ಮೇಲ್ ಕಳುಹಿಸಿದರೆ ಸಾಕು. ಮುಟ್ಟಿನ ರಜೆ ಪಡೆಯುವುದನ್ನು ಉನ್ನತ ಅಧಿಕಾರಿಗಳು ಅನಗತ್ಯವಾಗಿ ಪ್ರಚಾರ ಮಾಡಬಾರದು. ಮುಟ್ಟು ಆದವರು ಅರ್ಧ ದಿನ ರಜೆ ಬೇಕಾದರೂ ಪಡೆಯಬಹುದು ಎಂದೂ ಮಸೂದೆಯಲ್ಲಿದೆ.

ಋತುಸ್ರಾವವನ್ನು ಸುರಕ್ಷಿತ, ಸುಭದ್ರ ಮತ್ತು ಸುಲಭವಾಗಿ ವಿಲೇವಾರಿ ಮಾಡಲು ತ್ಯಾಜ್ಯ ಡಸ್ಟ್‌ಬಿನ್‌ಗಳು, ಟಿಶ್ಯೂ ಪೇಪರ್, ಟಾಯ್ಲೆಟ್ ಪೇಪರ್‌ಗಳು, ಬ್ಯಾಗ್‌ಗಳು, ಲಕೋಟೆಗಳು, ಪತ್ರಿಕೆಗಳನ್ನು ಒದಗಿಸಬೇಕು. ಮುಟ್ಟಿನ ನೈರ್ಮಲ್ಯ ಕುರಿತು ಜಾಗೃತಿ ಮೂಡಿಸಲು ಮತ್ತು ಮುಟ್ಟಿನ ಆರೋಗ್ಯ ಶಿಕ್ಷಣ ಮತ್ತು ನೈರ್ಮಲ್ಯ ಉತ್ಪನ್ನಗಳು, ಋತುಚಕ್ರ ಸ್ನೇಹಿ ಶೌಚಾಲಯಗಳು ಇತ್ಯಾದಿಗಳ ಕುರಿತು ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾರ್ಯಾಗಾರಗಳು, ಸಾರ್ವಜನಿಕ ಭಾಷಣಗಳು, ಉಪನ್ಯಾಸಗಳು, ವಿಚಾರ ಸಂಕಿರಣಗಳು, ಚರ್ಚೆಗಳನ್ನು ಆಯೋಜಿಸಲು ಪ್ರತಿವರ್ಷ ಮೇ 28ರಂದು ‘ಮುಟ್ಟಿನ ನೈರ್ಮಲ್ಯ ದಿನ’ ಎಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದೂ ಈ ಮಸೂದೆ ಹೇಳಿದೆ.

ಸರ್ಕಾರಿ ಅಥವಾ ಯಾವುದೇ ಖಾಸಗಿ ಸಂಸ್ಥೆಯಲ್ಲಿ ಮುಟ್ಟಿನ ಸಮಯದಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಪಡೆಯಬಹುದು ಮತ್ತು ಕೆಲಸಕ್ಕೆ ಗೈರಾಗಬಹುದು.

ಭಾನುವಾರ ಅಥವಾ ಯಾವುದೇ ಇತರ ಸಾಮಾನ್ಯ ರಜಾ ದಿನಗಳಿದ್ದಲ್ಲಿ ಮರುದಿನ ಒಂದು ದಿನದ ಮುಟ್ಟಿನ ರಜೆ ಪಡೆಯಬಹುದು.

ಇತರ ರಜೆಗಳಲ್ಲಿ (ಸಿಎಲ್‌, ಇಎಲ್‌, ಆರ್‌ಎಸ್‌ ಇತ್ಯಾದಿ) ದಿನಗಳಲ್ಲಿ ಮುಟ್ಟಾದರೆ, ಯಾವುದೇ ಮುಟ್ಟಿನ ರಜೆ ಪಡೆಯಲು ಅರ್ಹತೆ ಇಲ್ಲ.

ಮುಟ್ಟಿನ ರಜೆ ಪಡೆಯಲು ಬಯಸದಿದ್ದರೆ ಮನೆಯಿಂದ ಕೆಲಸ ಮಾಡಬಹುದು. ವರ್ಷದಲ್ಲಿ ಮುಟ್ಟಿನ ರಜೆ ದಿನಗಳ ಸಂಖ್ಯೆ 12 ಮೀರಬಾರದು.

ಮುಟ್ಟಿನ ರಜೆ ಪಡೆಯುವ ಅರ್ಹತೆಯು ಋತುಬಂಧವಾದಾಗ ಅಥವಾ ಉದ್ಯೋಗಿ 52 ವರ್ಷ ವಯಸ್ಸಿನವರಾದಾಗ ಯಾವುದು ಮೊದಲೊ ಆ ದಿನ ಕೊನೆಗೊಳ್ಳಲಿದೆ.

ಬಳಕೆಯಾಗದ ಮಾಸಿಕ ಮುಟ್ಟಿನ ರಜೆ ಸಂಗ್ರಹ ಆಗುವುದಿಲ್ಲ. ನಂತರದ ತಿಂಗಳುಗಳಿಗೆ ಸೇರಿಸಲು ಕೂಡಾ ಅವಕಾಶ ಇಲ್ಲ.

ವಿದ್ಯಾರ್ಥಿನಿಯರು ಮುಟ್ಟಾದರೆ ಪ್ರತಿ ತಿಂಗಳು ಎರಡು ದಿನ ರಜೆ ಮತ್ತು ಮುಟ್ಟಿನ ಸಮಸ್ಯೆಗಳಿಗೆ ಹಾಜರಾತಿಯಲ್ಲಿ ಶೇ 2ರಷ್ಟು ವಿನಾಯಿತಿ ನೀಡಬೇಕು‌.

ಪ್ರತ್ಯೇಕ ವಿಶ್ರಾಂತಿ ಕೊಠಡಿಗಳಲ್ಲಿ ಜೈವಿಕವಾಗಿ ಕೊಳೆಯುವ ಸ್ಯಾನಿಟರಿ ಪ್ಯಾಡ್‌ಗಳು, ಮುಟ್ಟಿನ ಕಪ್‌ಗಳು, ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಒದಗಿಸಬೇಕು.

ಬೆಳಿಗ್ಗೆ ತಡೆ, ಮಧ್ಯಾಹ್ನ ತೆರವು

ಈ ಮಧ್ಯೆ, ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಕೆಲವೇ ಗಂಟೆಗಳ ಅಂತರದಲ್ಲಿ ತೆರವುಗೊಳಿಸಿದೆ.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ, ‘ಬೆಂಗಳೂರು ಹೋಟೆಲ್‌ಗಳ ಸಂಘ’ದ ಅಧ್ಯಕ್ಷ ಎಚ್.ಎಸ್.ಸುಬ್ರಹ್ಮಣ್ಯ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು‌. ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಬಿ.ಕೆ‌.ಪ್ರಶಾಂತ್ ಕುಮಾರ್ ಅವರ ವಾದ ಆಲಿಸಿದ ನ್ಯಾಯಪೀಠ, ಅಧಿಸೂಚನೆಗೆ ಮಧ್ಯಂತರ ತಡೆ ನೀಡಿತು.

ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ’ ಎಂದು ಆದೇಶಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.

ಈ ತಡೆ ಆದೇಶ ಹೊರಬೀಳುತ್ತಿದ್ದಂತೆಯೇ, ಕಲಾಪ ಕೊನೆಗೊಳ್ಳುವ ಸಮಯದಲ್ಲಿ ಅಡ್ವೊಕೇಟ್‌ ಜನರಲ್‌ ಶಶಿಕಿರಣ ಶೆಟ್ಟಿ, ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಹಾಗೂ ಮಧ್ಯಂತರ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ರವಿವರ್ಮ ಕುಮಾರ್ ನ್ಯಾಯಪೀಠದ ಮುಂದೆ ಹಾಜರಾಗಿ, ‘ಪ್ರತಿವಾದಿಗಳ ಆಕ್ಷೇಪಣೆ ಆಲಿಸದೇ ಅರ್ಜಿದಾರರ ಮಧ್ಯಂತರ ಮನವಿಯನ್ನು ಮಾನ್ಯ ಮಾಡಲಾಗಿದೆ’ ಎಂದು ಆದೇಶಕ್ಕೆ ತೀವ್ರ ತಕರಾರು ವ್ಯಕ್ತಪಡಿಸಿದರು.

ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ ಶಶಿಕಿರಣ ಶೆಟ್ಟಿ ಅವರು, ‘ಋತುಚಕ್ರದ ರಜೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೀತಿ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್‌ ಪ್ರಕರಣವೊಂದರಲ್ಲಿ ಆದೇಶಿಸಿದೆ. ಇದಕ್ಕೆ ಅನುಗುಣವಾಗಿಯೇ ರಾಜ್ಯ ಕಾನೂನು ಆಯೋಗ ಶಿಫಾರಸು ಮಾಡಿದೆ. ಇದನ್ನೆಲ್ಲಾ ಪರಿಗಣಿಸಿಯೇ ರಾಜ್ಯ ಸರ್ಕಾರ ಸಾಂವಿಧಾನಿಕವಾಗಿ ಕೊಡಮಾಡಲಾಗಿರುವ 142ನೇ ವಿಧಿಯಡಿ ತನ್ನ ಅಧಿಕಾರ ಬಳಸಿ ಈ ಕ್ರಮ ಕೈಗೊಂಡಿದೆ. ಅಧಿಸೂಚನೆ ಕಾನೂನುಬದ್ಧವಾಗಿಯೇ ಇದೆ. ಹೀಗಿರುವಾಗ, ಸರ್ಕಾರದ ವಿಸ್ತೃತ ವಾದ ಆಲಿಸದೆಯೇ ಅಧಿಸೂಚನೆಗೆ ತಡೆ ನೀಡಿರುವುದು ಸಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ ಬೆಳಗ್ಗೆಯಷ್ಟೇ ಸರ್ಕಾರದ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆ ಆದೇಶವನ್ನು ಸಂಜೆ ಹಿಂಪಡೆಯಿತು.

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ

TAGGED:000 fine possible if menstrual leave is not grantedRs 5
Share This Article
Facebook Twitter Copy Link Print
Previous Article Helicopters, planes for government work ಸರ್ಕಾರದ ಕೆಲಸಕ್ಕೆ ಹೆಲಿಕಾಪ್ಟರ್, ವಿಮಾನ ಬಳಕೆಗೆ ರಾಜ್ಯ ಸರ್ಕಾರ ನಿರ್ಧಾರ
Next Article ಹುಟ್ಟುಹಬ್ಬದಂದೇ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕ ಸಾವು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?