Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ನ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ.
ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರ್ ಅತಿ ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಬಸ್ ಗೆ ಡಿಕ್ಕಿಯಾದ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.