Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಸ್ ಪ್ರಯಾಣ ಉಚಿತ ಕೊಡಲು ನಿಮಗೆ ಕೇಳಿದ್ದವರು ಯಾರು? ಸರ್ಕಾರಿ ನೌಕರರಿಗೆ ಸಂಬಳ ಕೊಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲದಂತಾಗಿದೆಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಮೌಖಿಕವಾಗಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜನೌಷಧ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣದ ವಿಚಾರಣೆಯ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆರ್ಥಿಕ ನಿರ್ವಹಣೆಯ ಕುರಿತು ಮೌಖಿಕವಾಗಿ ಚಾಟಿ ಬೀಸಿದೆ.
ಅಡ್ವೊಕೇಟ್ ಜನರಲ್ ಜೆ.ಎಂ.ಗಂಗಾಧರ ಅವರು, ‘ರಾಜ್ಯ ಸರ್ಕಾರದ ನೀತಿಗಳು ಜನಪರವಾಗಿಯೇ ಇವೆ. ಜನೌಷಧಿ ಕೇಂದ್ರಗಳು ಸಬ್ಸಿಡಿ ದರದಲ್ಲಿ ಔಷಧಿ ವಿತರಿಸಿದರೆ ರಾಜ್ಯ ಸರ್ಕಾರ ಸಂಪೂರ್ಣ ಪುಕ್ಕಟೆಯಾಗಿ ಔಷಧಿಗಳನ್ನು ಪೂರೈಸುತ್ತಿದೆ’ ಎಂದು ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು.
ಇದನ್ನು ಆಕ್ಷೇಪಿಸಿದ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಅನಿರುದ್ಧ ಎ.ಕುಲಕರ್ಣಿ, ಸರ್ಕಾರದ ನೀತಿ ಹೇಗೆ ಜನವಿರೋಧಿ ನಿಲುವಿನಿಂದ ಕೂಡಿದೆ ಎಂದು ವಿವರಿಸಿದರು.
ಒಂದು ಹಂತದಲ್ಲಿ ಸರ್ಕಾರದ ಸಮರ್ಥನೆಯನ್ನು ತಳ್ಳಿಹಾಕಿದ ನ್ಯಾಯಪೀಠ, ‘ಕೇಂದ್ರ ಸರ್ಕಾರವೂ ಜನರ ಕಲ್ಯಾಣಕ್ಕಾಗಿಯೇ ಅಲ್ಲವೇ ಜನೌಷಧಿ ಯೋಜನೆ ಜಾರಿಗೆ ತಂದಿರುವುದು?, ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸಬೇಕು ಎಂದು ಯಾರಾದರೂ ನಿಮಗೆ ದೂರು ಕೊಟ್ಟಿದ್ದರಾ? ಇಲ್ಲವಲ್ಲಾ? ಹಾಗೆಯೇ, ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಿ ಎಂದು ಯಾರಾದರೂ ಕೇಳಿದ್ದರಾ? ಇಲ್ಲವಲ್ಲಾ?… ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.