Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರಿನಲ್ಲ ಓಡಾಡುವ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕಿರುಕುಳ ನೀಡುತ್ತಿದ್ದ ವಿಚಿತ್ರ ಸೈಕೋಪಾತ್ನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವಿನೋದ್, ಕಳೆದ ಒಂದು ತಿಂಗಳಿಂದ ಸಂಜೆ 6 ಗಂಟೆಯ ಬಳಿಕ ಒಂಟಿಯಾಗಿ ಸಂಚರಿಸುವ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ. ಒಬ್ಬಂಟಿಯಾಗಿ ನಡೆದುಕೊಂಡು ಬರುವವರನ್ನಷ್ಟೇ ಅಲ್ಲದೇ ಬೈಕ್‌ನಲ್ಲಿ ಬರುವ ಹೆಣ್ಣು ಮಕ್ಕಳನ್ನೂ ಈತ ಬಿಡುತ್ತಿರಲಿಲ್ಲ. ಒಂಟಿ ಮಹಿಳೆಯರ ಹತ್ತಿರ ಹೋಗಿ ತಬ್ಬಿಕೊಳ್ಳುತ್ತಿದ್ದ , ರಸ್ತೆಗುಂಡಿ ಬಳಿ ಮಹಿಳೆಯರು ಗಾಡಿಯನ್ನು ನಿಧಾನಿಸಿದಾಗಲೂ ಹೋಗಿ ತಬ್ಬಿಕೊಂಡು ಅಸಭದ್ಯವಾಗಿ ವರ್ತಿಸುತ್ತಿದ್ದ. ಅಷ್ಟಕ್ಕೆ ಸಮ್ಮನಾಗದ ಸೈಕೋ ವಿನೋದ್, ಮಹಿಳೆಯರ ಖಾಸಗಿ ಅಂಗಗಳನ್ನು ಮುಟ್ಟಿ ವಿಕೃತಿ ಮೆರೆಯುತ್ತಿದ್ದ. ತಿಂಗಳಾನುಗಟ್ಟಲೆ ಈತನ ಕಾಮುಕತೆಗೆ ಬ್ರೇಕ್ ಬಿದ್ದಿರಲಿಲ್ಲ.
ಡಿಸೆಂಬರ್ 2ರಂದು ಸುಂಕದಕಟ್ಟೆಯ ಶ್ರೀನಿವಾಸ ಸರ್ಕಲ್ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆ ರಸ್ತೆ ಗುಂಡಿಯಿಂದಾಗಿ ವೇಗ ಕಡಿಮೆ ಮಾಡಿದಾಗ, ವಿನೋದ್ ತಕ್ಷಣ ಓಡಿ ಬಂದು ಆಕೆಯನ್ನು ಹಿಡಿದುಕೊಂಡು ಅಸಭ್ಯವಾಗಿ ವರ್ತಿಸಿದ್ದ.
ಈ ವೇಳೆ ಹಿಂದೆ ಕಾರಿನಲ್ಲಿ ಬರುತ್ತಿದ್ದ ಮಹಿಳೆಯ ಪತಿ ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ ಕಾಮುಕ ತಪ್ಪಿಸಿಕೊಂಡು ಪರಾರಿಯಾಗಿದ್ದ. ತಕ್ಷಣ 112ಕ್ಕೆ ಕರೆ ಮಾಡಲಾಗಿದ್ದು, ಹೊಯ್ಸಳ ಪೊಲೀಸರ ಸಹಕಾರದಿಂದ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯರು ಇಂತಹ ಪ್ರಕರಣಗಳ ಬಗ್ಗೆ ತಕ್ಷಣ ದೂರು ನೀಡಲು ಪೊಲೀಸರು ಮನವಿ ಮಾಡಿದ್ದಾರೆ.