Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಉತ್ತರ ಪ್ರದೇಶ ರಾಜ್ಯಾಧ್ಯಕ್ಷರಾಗಿ ಕೇಂದ್ರ ಹಣಕಾಸು ರಾಜ್ಯ ಸಚಿವರಾಗಿರುವ ಪಂಕಜ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಯುವ ನಾಯಕ ನಿತಿನ್ ನಬಿನ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂದು (ಡಿಸೆಂಬರ್ 14) ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಅತ್ಯಂತ ಕಿರಿಯ, ಯುವ ನಾಯಕನಿಗೆ ಮಣೆಹಾಕಲಾಗಿದೆ.
ನಿತಿನ್ ನಬಿನ್ ಕುಟುಂಬ ರಾಜಕೀಯ ಹಿನ್ನಲೆ ಹೊಂದಿದೆ. ನಿತಿನ್ ನಬಿನ್ ತಂದೆ ನಬಿನ್ ಕಿಶೋರ್ ಪ್ರಸಾದ್ ಸಿನ್ಹ ಬಿಜೆಪಿಯ ಹಿರಿಯ ನಾಯಕರಾಗಿದ್ದರು.
ಶಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಂದೆ ನಿಧನದ ಬಳಿಕ ಬಿಜೆಪಿಯಲ್ಲಿ ನಿತಿನ್ ನಬಿನ್ ಸಕ್ರಿಯರಾಗಿದ್ದು, ಹಂತ ಹಂತವಾಗಿ ಬಿಜೆಪಿಯಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಕಾರ್ಯಕರ್ತನಾಗಿ, ಮುಖಂಡನಾಗಿ, ಶಾಸಕನಾಗಿ ಬಳಿಕ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ನಿತಿಶ್ ಕುಮಾರ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.