Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಷೇರು ಮಾರ್ಕೆಟ್ ಹೆಸರಲ್ಲಿ ಆನ್ಲೈನ್ ದಂಧೆಕೋರರು ಕೋಟ್ಯಂತರ ರೂ ವಂಚಿಸಿರುವಂತಹ ಘಟನೆ ನಡೆದಿದೆ.ಬೆಂಗಳೂರಿನ ಹಿರಿಯ ಉದ್ಯಮಿ, ರಾಮ ಭಕ್ತರಾದ ರಾಜೇಂದ್ರ ನಾಯ್ಡು ಅವರನ್ನು ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವಂಚಿಸಿರುವ ಸೈಬರ್ ಖದೀಮರು, 8.3 ಕೋಟಿ ರೂ. ಎಗರಿಸಿದ್ದಾರೆ.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಬಂದ ಲಾಭದ ಹಣವನ್ನು ದಾನ ಕಾರ್ಯಗಳಿಗೆ ಬಳಸಬಹುದು ಎಂಬ ಉದ್ದೇಶದಿಂದ ರಾಜೇಂದ್ರ ನಾಯ್ಡು ಹೂಡಿಕೆಗೆ ಮುಂದಾಗಿದ್ದರು. ರಿಲಯನ್ಸ್ ಕಂಪನಿಯ ಹೆಸರನ್ನು ಬಳಸಿ ನಂಬಿಕೆ ಮೂಡಿಸಿದ ವಂಚಕರು, RARCLLPRO ಎಂಬ ಮೊಬೈಲ್ ಆ್ಯಪ್ ಇನ್ಸ್ಟಾಲ್ ಮಾಡುವಂತೆ ಸೂಚಿಸಿದ್ದರು. ಆ್ಯಪ್ ಮೂಲಕ ಹೂಡಿಕೆ ವಿವರಗಳು ತೋರಿಸುತ್ತಿದ್ದುದರಿಂದ ನಂಬಿದ ನಾಯ್ಡು ಮೊದಲಿಗೆ 25 ಲಕ್ಷ ರೂಪಾಯಿ RTGS ಮೂಲಕ ವರ್ಗಾಯಿಸಿದ್ದರು.
ಆ್ಯಪ್ನಲ್ಲಿ ಹೂಡಿಕೆ ಯಶಸ್ವಿಯಾಗಿದೆ ಎಂಬುದು ತೋರಿದ ಬಳಿಕ ಹಂತ ಹಂತವಾಗಿ ಒಟ್ಟು 8.3 ಕೋಟಿ ರೂಪಾಯಿಯನ್ನು ಹೂಡಿಕೆ ಮಾಡಿದ್ದಾರೆ. ಆ್ಯಪ್ನಲ್ಲಿ ಈ ಮೊತ್ತಕ್ಕೆ 59.4 ಕೋಟಿ ರೂಪಾಯಿ ಲಾಭಾಂಶ ಬಂದಿದೆ ಎಂದು ತೋರಿಸಲಾಗಿತ್ತು. ಇದರಲ್ಲಿ 15 ಕೋಟಿ ರೂಪಾಯಿ ವಿತ್ಡ್ರಾ ಮಾಡಲು ಪ್ರಯತ್ನಿಸಿದಾಗ ಸಾಧ್ಯವಾಗಿರಲಿಲ್ಲ. ಇದರಿಂದ ನಾಯ್ಡು ಅವರಿಗೆ ವಂಚನೆಯ ಅನುಮಾನ ಬಂದಿದೆ.
ಹಣ ವಿತ್ಡ್ರಾ ಮಾಡಲು ಸಾಧ್ಯವಾಗದ ಬಗ್ಗೆ ಪ್ರಶ್ನಿಸಿದಾಗ ವಂಚಕರು, ಅದಕ್ಕೆ ಶೇಕಡಾ 18 ರಷ್ಟು ಸೇವಾ ಶುಲ್ಕವಾಗಿ 2.70 ಕೋಟಿ ರೂಪಾಯಿ ಪಾವತಿಸಬೇಕು ಎಂದು ಬೇಡಿಕೆ ಇಟ್ಟರು. ಇದರಿಂದ ಅನುಮಾನಗೊಂಡ ರಾಜೇಂದ್ರ ನಾಯ್ಡು ತಕ್ಷಣ 1930 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದರು.