Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟೀಂ ಇಂಡಿಯಾ ಮಾಜಿ‌ ಕೋಚ್ ಅನ್ಶುಮನ್ ಗಾಯಕ್ವಾಡ್ ಇನ್ನಿಲ್ಲ
ದೇಶಪ್ರಮುಖ

ಟೀಂ ಇಂಡಿಯಾ ಮಾಜಿ‌ ಕೋಚ್ ಅನ್ಶುಮನ್ ಗಾಯಕ್ವಾಡ್ ಇನ್ನಿಲ್ಲ

Share
1 Min Read
SHARE

newsics.com

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ, ಭಾರತ ತಂಡದ ಮಾಜಿ ಕೋಚ್‌ ಅನ್ಶುಮನ್‌ ಗಾಯಕ್ವಾಡ್‌ ಬುಧವಾರ ಬರೋಡಾದಲ್ಲಿ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಕಳೆದ ಹಲವು ದಿನಗಳಿಂದ ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅನ್ಶುಮನ್‌, ಚಿಕಿತ್ಸೆಗಾಗಿ ಲಂಡನ್‌ಗೆ ತೆರಳಿದ್ದರು. ಕಳೆದ ತಿಂಗಳಷ್ಟೇ ಅವರು ತಮ್ಮ ತವರೂರು ಬರೋಡಾಕ್ಕೆ ವಾಪಸಾಗಿ ಚಿಕಿತ್ಸೆ ಮುಂದುವರಿಸಿದ್ದರು.

ಗಾಯಕ್ವಾಡ್‌ ಅವರ ಚಿಕಿತ್ಸೆಗೆ ಆರ್ಥಿಕ ನೆರವು ನೀಡುವಂತೆ ಮಾಜಿ ಕ್ರಿಕೆಟಿಗರು ಬಿಸಿಸಿಐಗೆ ಮನವಿ ಸಲ್ಲಿಸಿದ್ದರು. ಬಿಸಿಸಿಐ 1 ಕೋಟಿ ರು. ನೆರವು ಬಿಡುಗಡೆ ಮಾಡಿತ್ತು.

ಭಾರತ ಪರ 40 ಟೆಸ್ಟ್‌, 15 ಏಕದಿನ ಪಂದ್ಯಗಳನ್ನು ಆಡಿದ್ದ ಗಾಯಕ್ವಾಡ್‌, ಒಟ್ಟಾರೆ 22 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ 205 ಪ್ರಥಮ ದರ್ಜೆ ಪಂದ್ಯಗಳನ್ನಾಡಿ 12,136 ರನ್‌ ಕಲೆಹಾಕಿದ್ದರು.

ಸಾಕಷ್ಟು ರಕ್ಷಣಾತ್ಮಕ ಆಟಕ್ಕೆ ಹೆಸರುವಾಸಿಯಾಗಿದ್ದ ಅನ್ಶುಮನ್‌ ಗಾಯಕ್ವಾಡ್‌ 1974-75ರ ಅವಧಿಯಲ್ಲಿ ಹಲವಾರು ಬಾರಿ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಜತೆ ಇನಿಂಗ್ಸ್‌ ಆರಂಭಿಸಿದ್ದಾರೆ.

ಜಲಂದರ್‌ನಲ್ಲಿ ನಡೆದ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ಎದುರಿನ ಪಂದ್ಯದಲ್ಲಿ ಅನ್ಶುಮನ್‌ ಗಾಯಕ್ವಾಡ್‌ ದ್ವಿಶತಕ ಸಿಡಿಸಿದ್ದರು. ಇದು ಆ ಕಾಲದಲ್ಲಿ ದಾಖಲಾದ ಅತಿ ಮಂದಗತಿಯ ಟೆಸ್ಟ್ ದ್ವಿಶತಕ ಎನಿಸಿತ್ತು.
ಶಾರ್ಜಾದಲ್ಲಿ ಸಚಿನ್‌ ತೆಂಡುಲ್ಕರ್‌ 1998ರಲ್ಲಿ ಅವಿಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದಾಗ, 1999ರಲ್ಲಿ ದೆಹಲಿಯ ಫಿರೋಜ್‌ ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ಅನಿಲ್‌ ಕುಂಬ್ಳೆ ಪಾಕಿಸ್ತಾನ ವಿರುದ್ಧ ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌ ಕಬಳಿಸಿದಾಗ, ಗಾಯಕ್ವಾಡ್‌ ಅವರು ಭಾರತ ತಂಡದ ಕೋಚ್‌ ಆಗಿದ್ದರು.

ಭಾರತದ ಮತ್ತೋರ್ವ ದಿಗ್ಗಜ ಸ್ಪಿನ್ನರ್ ಹರ್ಭಜನ್ ಸಿಂಗ್ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದು ಕೂಡಾ ಇದೇ ಗಾಯಕ್ವಾಡ್‌ ಟೀಂ ಇಂಡಿಯಾ ಕೋಚ್ ಆಗಿದ್ದಾಗ.

ಮುಡಾ ಹಗರಣ: ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲರ ಅನುಮತಿ ಸಾಧ್ಯತೆ, ಸಂಕಷ್ಟದಲ್ಲಿ ಸಿದ್ದರಾಮಯ್ಯ

ಶಿಮ್ಲಾದಲ್ಲಿ ಮೇಘಸ್ಫೋಟ: 20 ಮಂದಿ ನಾಪತ್ತೆ

ಕೂಡುಮಲೆ ದೇಗುಲಕ್ಕೆ ನುಗ್ಗಿದ ಮಳೆ ನೀರು: ಹುಂಡಿಗೆ ಹಾಕಿದ್ದ ಕಾಣಿಕೆ ಹಣ ನೀರುಪಾಲು

TAGGED:Team India former coach Anshuman Gaikwad is no more
Share This Article
Facebook Twitter Copy Link Print
Previous Article ವೆಸ್ಟರ್ನ್ ಡ್ರೆಸ್‌ಗೂ ಕರಿಮಣಿ ತೊಟ್ಟ ಅಂಬಾನಿ ಸೊಸೆ
Next Article ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಒಳವರ್ಗೀಕರಣಕ್ಕೆ ರಾಜ್ಯಗಳಿಗೆ ಅಧಿಕಾರವಿದೆ: ಸುಪ್ರೀಂ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?