Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸ್ ಬಂದ ತಕ್ಷಣ ಬಾಲ್ಕನಿಯಿಂದ ಜಿಗಿದ ಯುವತಿ; ಮುಂದೆನಾಯ್ತು?
ಕರ್ನಾಟಕಪ್ರಮುಖ

ಪೊಲೀಸ್ ಬಂದ ತಕ್ಷಣ ಬಾಲ್ಕನಿಯಿಂದ ಜಿಗಿದ ಯುವತಿ; ಮುಂದೆನಾಯ್ತು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಪೊಲೀಸರ ಕಿರುಕುಳಕ್ಕೆ ಹೆದರಿ ಯುವತಿಯೊಬ್ಬಳು ಹೋಟೆಲ್‌ನ ಬಾಲ್ಕನಿಯಿಂದ ಪೈಪ್ ಮೂಲಕ ಇಳಿಯಲು ಯತ್ನಿಸಿ ಗಂಭೀರ ಗಾಯಗೊಂಡ ಪ್ರಕರಣವು ಚರ್ಚೆಗೆ ಗ್ರಾಸವಾಗಿದೆ. ಹಾಗೆಯೇ, ಘಟನೆಯಲ್ಲಿ ಪೊಲೀಸರ ಪಾತ್ರದ ಕುರಿತು ಅನುಮಾನಗಳು ವ್ಯಕ್ತವಾಗುತ್ತಿರುವಾಗಲೇ, ಹೆಚ್‌ಎಎಲ್ ಪೊಲೀಸರು ತಮ್ಮ ಲೋಪ ಮುಚ್ಚಿಹಾಕಲು ಹೋಟೆಲ್ ಮಾಲೀಕರ ಮೇಲೆ ನಿರ್ಲಕ್ಷ್ಯದ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ.

ಕಳೆದ ಶನಿವಾರ ತಡರಾತ್ರಿ ಬ್ರೂಕ್‌ಫೀಲ್ಡ್‌ನ ‘ಸೀ ಎಸ್ಟಾ ಲಾಡ್ಜ್’ನಲ್ಲಿ ಈ ಘಟನೆ ನಡೆದಿದೆ. ಸುಮಾರು ಎಂಟು ಮಂದಿ ಸ್ನೇಹಿತರ ಗುಂಪು ಹೋಟೆಲ್‌ನಲ್ಲಿ ಪಾರ್ಟಿ ಮಾಡುತ್ತಿದ್ದರು. ಈ ವೇಳೆ, ಸ್ಥಳೀಯರ ಗಲಾಟೆಯ ದೂರಿನ ಮೇರೆಗೆ 112 ಸಹಾಯವಾಣಿಗೆ ಕರೆ ಹೋಗಿದೆ. ಕರೆ ಸ್ವೀಕರಿಸಿದ ಹೆಚ್‌ಎಎಲ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಹೋಟೆಲ್‌ಗೆ ಬಂದ ಸಂದರ್ಭದಲ್ಲಿ, ಪಾರ್ಟಿ ಮಾಡುತ್ತಿದ್ದ ಯುವಕರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇನ್ನು ಪೊಲೀಸರ ಈ ನಡೆಯಿಂದಾಗಿ ತೀವ್ರ ಆತಂಕಕ್ಕೊಳಗಾದ ವೈಷ್ಣವಿ ಎಂಬ ಯುವತಿ, ಹೋಟೆಲ್‌ನ ಮೊದಲ ಮಹಡಿಯ ಬಾಲ್ಕನಿಯಿಂದ ಕೆಳಗೆ ಜಿಗಿಯಲು ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ. ಯುವತಿಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಪ್ರಕರಣವು ಪೊಲೀಸ್ ಇಲಾಖೆಗೆ ಮುಜುಗರ ತಂದಿರುವ ಬೆನ್ನಲ್ಲೇ, ಹೆಚ್‌ಎಎಲ್ ಪೊಲೀಸರು ಅಚ್ಚರಿಯ ಕ್ರಮ ಕೈಗೊಂಡಿದ್ದಾರೆ. ಯುವತಿಯ ತಂದೆ ಅಂತೋನಿ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ದೂರಿನಲ್ಲಿ, ‘ಸೀ ಎಸ್ಟಾ ಲಾಡ್ಜ್’ ಹೋಟೆಲ್ ಮಾಲೀಕರು ತಮ್ಮ ಕಟ್ಟಡದ ಬಾಲ್ಕನಿಯಲ್ಲಿ ಸುರಕ್ಷತಾ ಕ್ರಮಗಳನ್ನು ವಹಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಯುವತಿ ಬಾಲ್ಕನಿಯಿಂದ ಜಿಗಿಯಲು ಯತ್ನಿಸುವುದಕ್ಕೆ ಮುಖ್ಯ ಕಾರಣ ಪೊಲೀಸರ ಕಿರುಕುಳ ಮತ್ತು ಹಣದ ಬೇಡಿಕೆಯಾಗಿದ್ದು, ಆ ಅಂಶವನ್ನು ಮುಚ್ಚಿಡಲು ಪೊಲೀಸರು ಹೋಟೆಲ್ ಮಾಲೀಕರ ಮೇಲೆ ದೋಷವನ್ನು ಹೊರಿಸಿ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಅನುಮಾನಗಳು ಸ್ಥಳೀಯರಿಂದ ಮತ್ತು ಹೋಟೆಲ್ ಸಿಬ್ಬಂದಿಯಿಂದ ವ್ಯಕ್ತವಾಗಿದೆ. ಈ ಘಟನೆಯ ಸಂದರ್ಭದಲ್ಲಿ ಪೊಲೀಸರು ವರ್ತಿಸಿದ ರೀತಿ ಮತ್ತು ಅವರು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ತನಿಖೆ ನಡೆಸುವ ಬದಲು, ನಿರ್ಲಕ್ಷ್ಯದ ಆರೋಪವನ್ನು ಹೋಟೆಲ್ ಮಾಲೀಕರ ಮೇಲೆ ಹೊರಿಸುತ್ತಿರುವುದು ಹಲವು ಪ್ರಶ್ನೆಗಳಿಗೆ ಎಡೆಮಾಡಿದೆ.

ಮಹಿಳಾ ವೈದ್ಯೆಯ ಹಿಜಾಬ್‌ ತೆಗೆಯಲು ಯತ್ನಿಸಿದ ಬಿಹಾರ ಸಿಎಂ

TAGGED:Young woman jumped from balcony as soon as police arrived; what happened next?
Share This Article
Facebook Twitter Copy Link Print
Previous Article ಶಾಲೆಯಲ್ಲೇ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; 6 ವಿದ್ಯಾರ್ಥಿನಿಯರು ಅಮಾನತು
Next Article ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನೇ ಗಂಡನಿಗೆ ಕಳಿಸಿದ ಭೂಪ: ಆಮೇಲೆ ಆಗಿದ್ದೇನು?

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?