Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ರಾಮನಗರ : ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಂದೆ-ತಾಯಿಯನ್ನು ಕಳೆದುಕೊಂಡ 7 ವರ್ಷದ ಹೆಣ್ಣು ಮಗು ಅನಾಥವಾಗಿದೆ. ನವೀನ್ ಹಾಗೂ ವತ್ಸಲ ಕಳೆದ 8 ವರ್ಷಗಳ ಹಿಂದೆ ಮದುವೆಯಾಗಿದ್ದು, ಈ ದಂಪತಿಗೆ 7 ವರ್ಷದ ಹೆಣ್ಣುಮಗು ಇದೆ. ಸಣ್ಣಪುಟ್ಟ ವಿಚಾರಕ್ಕೆ ಪತಿ, ಪತ್ನಿ ಜಗಳವಾಡುತ್ತಿದ್ದರು.
ಕಳೆದ ವಾರ ದಂಪತಿ ಗಲಾಟೆ ಮಾಡಿಕೊಂಡು ಮಹಿಳಾ ಠಾಣೆ ಮೆಟ್ಟಿಲೇರಿದ್ದರು. ಗಲಾಟೆ ವಿಕೋಪಕ್ಕೆ ತಿರುಗಿದ್ದು, ನವೀನ್, ವಾತ್ಸಲಳನ್ನು ಕತ್ತುಹಿಸುಕಿ ಕೊಂದಿದ್ದಾನೆ. ಬಳಿಕ ನವೀನ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.