Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನಟ ಶಿವರಾಜ್‌ಕುಮಾರ್ ಅವರ ’45’ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಗಳಿಸಿದೆ.ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಚಿತ್ರ ‘45’ ಡಿಸೆಂಬರ್ 25ಕ್ಕೆ ತೆರೆಗೆ ಬರಲಿದೆ
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ , ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ʼ45ʼ ಮೂವಿ ಟ್ರೈಲರ್ ಔಟ್ ಆಗಿದೆ. ರಿಯಲ್ ಸ್ಟಾರ್ ಉಪೆಂದ್ರ ಅಂತೂ ಮಾಸ್ ಡೈಲಾಗ್ ಮೂಲಕವೇ ಅಬ್ಬರಿಸಿದ್ದಾರೆ. ಅದರಲ್ಲೂ ಶಿವಣ್ಣ ಹಿಂದೆಂದೂ ಕಂಡಿರದ ಲುಕ್‌ನಲ್ಲಿ ಮಿಂಚಿದ್ದಾರೆ.
ಸೀರೆ ಉಟ್ಟು ಕಾಣಿಸಿಕೊಂಡಿರುವ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ.ಸು ಫ್ರಮ್ ಸೋ’ ಚಿತ್ರದಲ್ಲಿ ಜೆಪಿ ತುಮ್ಮಿನಾಡು ಸೀರೆ ಲುಕ್ ಪ್ರಸಿದ್ಧವಾಗಿತ್ತು.ಈಗ ಕನ್ನಡದ ಖ್ಯಾತ ನಟ ಶಿವರಾಜ್‌ಕುಮಾರ್ ಅವರು ‘45’ ಚಿತ್ರಕ್ಕಾಗಿ ಇದೇ ರೀತಿಯ ಅವತಾರ ತಾಳಿದ್ದಾರೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ.
ಈ ಚಿತ್ರದ ಮೂಲಕ ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಡೈರೆಕ್ಟರ್ ಆಗಿದ್ದಾರೆ. ಅವರು ಪ್ರಥಮ ಸಿನಿಮಾದಲ್ಲೇ ಗೆಲ್ಲುವ ಸೂಚನೆ ನೀಡಿದ್ದಾರೆ.