Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ತಮ್ಮನನ್ನು ಅಣ್ಣನೇ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಸೊರಬದಲ್ಲಿ ನಡೆದಿದೆ.
ಪೊಲೀಸರು ಮಿಸ್ಸಿಂಗ್ ಕೇಸ್ ಬೆನ್ನತ್ತಿದ್ದ ವೇಳೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಹೋದರನ ಶವವನ್ನು ತೋಟದಲ್ಲಿ ಅಣ್ಣ ಹೂತಿಟ್ಟ ವಿಚಾರ ಗೊತ್ತಾಗಿದೆ.
ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಮಾಲತೇಶನೇ ಆರೋಪಿಯಾಗಿದ್ದಾನೆ.
ಹೆಂಡತಿ ಜೊತೆಗೆ ತಮ್ಮ ರಾಮಚಂದ್ರನ ಅಕ್ರಮ ಸಂಬಂಧ ವಿಷಯಕ್ಕೆ ಅಣ್ಣ ಮಾಲತೇಶ್ ಸಿಟ್ಟಾಗಿದ್ದ. ಹೀಗಾಗಿ ಆತನ ಕೊಲೆಗೆ ಪ್ಲ್ಯಾನ್ ಮಾಡಿದ್ದ ಈತ, ಬೇಗ ಮದುವೆಯಾಗಲೆಂದು ಪೂಜೆ ನೆಪದಲ್ಲಿ ಜೇಡಿಗೆರೆ ಬಳಿ ತಾನು ಕೆಲಸ ಮಾಡುತ್ತಿದ್ದ ತೋಟಕ್ಕೆ ರಾಮಚಂದ್ರನನ್ನು ಕೆರೆದುಕೊಂಡು ಹೋಗಿದ್ದ. ಪೂಜೆ ನೆಪದಲ್ಲಿ ತಮ್ಮನಿಗೆ ಸರಿಯಾಗಿ ಮದ್ಯ ಕುಡಿಸಿ, ನಂತರ ಕಂಬಕ್ಕೆ ಕಟ್ಟಿ ಆತನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದ. ಬಳಿಕ ಯಾರಿಗೂ ಗೊತ್ತಾಗದಂತೆ ಶವವನ್ನು ಗುಂಡಿಯಲ್ಲಿ ಹೂತು ಹಾಕಿದ್ದ. ರಾಮಚಂದ್ರ ನಾಪತ್ತೆ ಬಗ್ಗೆ ಕುಟುಂಬ ಆತಂಕದಲ್ಲಿದ್ದರೂ ತಾನು ಅಮಾಯಕ ಎಂಬ ರೀತಿ ಓಡಾಡಿಕೊಂಡಿದ್ದ. ಮಿಸ್ಸಿಂಗ್ ಕೇಸ್ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರು ತಮ್ಮನನ್ನು ಕೊಂದು ಅಮಾಯಕನಂತೆ ನಟಿಸುತ್ತಿದ್ದ ಅಣ್ಣನ ಕಳ್ಳಾಟವನ್ನು ಕುಟುಂಬದ ಎದುರು ಬಹಿರಂಗಪಡಿಸಿದ್ದಾರೆ.