Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಬೆಳಗಾವಿಯ ಪೋಕ್ಸೊ ನ್ಯಾಯಾಲಯ 30 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕು ಕೌಜಲಗಿ ಗ್ರಾಮದ ವೀರಪ್ಪ ಮುತ್ತಪ್ಪ ದಾನನ್ನವರ(30) ಶಿಕ್ಷೆಗೊಳಗಾದ ಅಪರಾಧಿ.
ನೊಂದ ಬಾಲಕಿ ಹುಟ್ಟು ಮೂಕಿಯಾಗಿದ್ದು ಮಾನಸಿಕ ದುರ್ಬಲ ಎಂದು ಗೊತ್ತಿದ್ದರೂ 2023 ರ ಸೆಪ್ಟೆಂಬರ್ 19 ರಂದು ಸಂಜೆ 4 ಗಂಟೆ ಸುಮಾರಿಗೆ ಆತ ಬಾಲಕಿಯ ಮನೆಯ ಒಳಗೆ ಹೋಗಿ ಬಾಗಿಲು ಮುಚ್ಚಿ ಒತ್ತಾಯಪೂರ್ವಕವಾಗಿ ಅತ್ಯಾಚಾರ ಎಸಗಿದ್ದಾನೆ.
ಈ ಘಟನೆ ಬಗ್ಗೆ ಸನ್ನೆ ಮಾಡಿ ಹಾವಭಾವ ಮೂಲಕ ಆರೋಪಿತನು ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಬಾಲಕಿ ಹೇಳಿದ್ದ ಪ್ರಕರಣಕ್ಕೆ ಸಂಬಂಧಿಸಿ ಕುಲಗೋಡ ಎಸ್ಐ ಜಿ.ಎಸ್.ಪಾಟೀಲ ಪ್ರಕರಣ ದಾಖಲು ಮಾಡಿಕೊಂಡಿದ್ದರು.
ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೋಡ ಮುಂದಿನ ತನಿಖೆ ಮಾಡಿ ಪ್ರಕರಣವನ್ನು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯ-1 ಬೆಳಗಾವಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 8 ಸಾಕ್ಷಿಗಳನ್ನು
ವಿಚಾರಿಸಿ, 44 ದಾಖಲೆ ಮತ್ತು 14 ಮುದ್ದೆ ಮಾಲುಗಳ ಆಧಾರದ ಮೇಲೆ ಆರೋಪಿ ಈರಪ್ಪ ದಾನನ್ನವರ ಮೇಲಿನ ಆರೋಪ ಸಾಬೀತಾಗಿವೆ ಎಂದು ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ತೀರ್ಪು ನೀಡಿದ್ದಾರೆ.
ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ನಾಲ್ಕು ಲಕ್ಷ ರೂ. ಪರಿಹಾರ ಧನ ನೀಡಲು ನ್ಯಾಯಾಲಯ ಆದೇಶಿಸಿದೆ. ಪರಿಹಾರ ಹಣವನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಐದು ವರ್ಷಗಳವರೆಗೆ ಠೇವಣಿ ಇಡಲು ನ್ಯಾಯಾಲಯ ಆದೇಶಿಸಿದೆ. ಸರಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿದ್ದರು.
ಪತ್ನಿಯೊಂದಿಗೆ ಅನೈತಿಕ ಸಂಬಂಧ – ತಮ್ಮನನ್ನೇ ಕುತ್ತಿಗೆ ಹಿಸುಕಿ ಕೊಂದ ಅಣ್ಣ