Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಶಿವಮೊಗ್ಗ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿ ಚಿನ್ನಯ್ಯ ಬಿಡುಗಡೆಯಾಗಿದ್ದಾನೆ.
ಪತ್ನಿ ಮಲ್ಲಿಕಾ ಮತ್ತು ವಕೀಲರ ಜೊತೆಗೆ ಚೆನ್ನಯ್ಯ ಕಾರ್ ನಲ್ಲಿ ತೆರಳಿದ್ದಾನೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಚಿನ್ನಯ್ಯ ತೆರಳಿದ್ದಾನೆ. ನಿನ್ನೆ ಬೆಳ್ತಂಗಡಿ ಕೋರ್ಟ್ ನಲ್ಲಿ ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಚಿನ್ನಯ್ಯ ಬಿಡುಗಡೆ ಮಾಡಲಾಗಿದೆ.
ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿರುವುದಾಗಿ ಚಿನ್ನಯ್ಯ ಹೇಳಿದ್ದ. ಆ. 23ರಂದು ಸುದೀರ್ಘ ವಿಚಾರಣೆಯ ನಂತರ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಬಂಧಿಸಲಾಗಿತ್ತು. ಸೆ. 6ರಂದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದು, ಶಿವಮೊಗ್ಗ ಜೈಲಿನಲ್ಲಿ ಇರಿಸಲಾಗಿತ್ತು. ದೆ. ಚೆನ್ನಯ್ಯ ಬಿಡುಗಡೆಗೆ ನ್ಯಾಯಾಧೀಶರು ಒಪ್ಪಿಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಚಿನ್ನಯ್ಯನ್ನು ಜೈಲಿಂದ ಬಿಡುಗಡೆ ಮಾಡಲಾಗಿದೆ.