Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ರಾಜ್ಯ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆ ಪ್ರತಿಕ್ರಿಯಿಸಿದ ಸಚಿವರು, ಒಳ ಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ 947 ಪಿಎಸ್‌ಐ ಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಒಳ ಮೀಸಲು ಕಲ್ಪಿಸುವ ಪ್ರಕ್ರಿಯೆ ಪೂರ್ಣವಾಗಿದ್ದರಿಂದ ಈಗ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ 167 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದೇವೆ ಎಂದು ತಿಳಿಸಿದರು.