Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಉಚಿತವಾಗಿ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ರಸ್ತೆಬದಿ ವ್ಯಾಪಾರಿಯೋರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.
ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿರುವ ಪಾಮಿಪುರಿ ಅಂಗಡಿಯಲ್ಲಿ ರಾತ್ರಿ ಸುಮಾರು 10.30ರ ವೇಳೆಗೆ ಘಟನೆ ನಡೆದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವ ಅಂಗಡಿಗೆ ಬಂದಿದ್ದು, ಫ್ರೀಯಾಗಿ ತನಗೆ ಪಾನಿಪುರಿ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾನೆ. ಆದರೆ ತನ್ನ ದೈನಂದಿನ ಜೀವನಕ್ಕೆ ಇದೇ ವ್ಯಾಪಾರ ನಂಬಿಕೊಂಡಿದ್ದ ವ್ಯಾಪಾರಿ, ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವಿಚಾರಕ್ಕೆ ವಾಗ್ವಾದ ಆರಂಭವಾಗಿದ್ದು, ಈ ವೇಳೆ ಏಕಾಕಿ ಆರೋಪಿ ಚಾಕು ತೆಗೆದು ವ್ಯಾಪಾರಿಯ ಹೊಟ್ಟೆಯ ಭಾಗಕ್ಕೆ ಚುಚ್ಚಿ ಪರಾರಿಯಾಗಿದ್ದಾನೆ.
ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಸಂಬಂಧ ಪ್ರತ್ಯಕ್ಷದರ್ಶಿಗಳ ಹೇಳಿಕೆ ಮತ್ತು ಸಮೀಪದ ಅಂಗಡಿಗಳ ಸಿಸಿ ಕ್ಯಾಮರಾ ದೃಶ್ಯಗಳನ್ನು ಆಧರಿಸಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.