Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕೆಎಸ್ಆರ್ಟಿಸಿ ಬಸ್ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ನಡೆದಿದೆ.ಕಳುವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ.
ಬೆಂಗಳೂರಿನಿಂದ ಹೈದರಾಬಾದ್ಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಅನ್ನು ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ಕೆಎ 57 ಎಫ್-3911 ಸಂಖ್ಯೆಯ ಬಸ್ ನಿಲ್ಲಿಸಲಾಗಿತ್ತು. ಊಟಕ್ಕೆಂದು ಕೆಳಗೆ ಇಳಿದು ಬರೋವಷ್ಟರಲ್ಲಿ ಸೀಟ್ನಲ್ಲಿ ಇಟ್ಟಿದ್ದ ಹಣದ ಬ್ಯಾಗ್ ನಾಪತ್ತೆಯಾಗಿದೆ. ಕಳುವಾದ ಹಣ ಹೈದರಾಬಾದ್ ಮೂಲದ ಉದ್ಯಮಿ ಕೆ.ವೆಂಕಟೇಶ್ವರ ರಾವ್ಗೆ ಸೇರಿದ್ದು, ಬೆಂಗಳೂರಿನಲ್ಲಿದ್ದ ಮನೆ ಮಾರಾಟದಿಂದ ಬಂದಿದ್ದ ನಗದನ್ನು ಅವರು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ.
ಟಾಟಾ ಇಂಡಿಕಾ ಕಾರಿನಲ್ಲಿ ಬಂದಿದ್ದ ವ್ಯಕ್ತಿ ಹಣ ದೋಚಿದ್ದಾನೆ ಎಂದು ಬಸ್ನಲ್ಲಿದ್ದ ಇತರ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಕಾರಿನಿಂದ ಇಳಿದು ನೇರವಾಗಿ ಬಸ್ನೊಳಗೆ ನುಗ್ಗಿದ್ದ ವ್ಯಕ್ತಿ ಸೀಟ್ ನಂ.4ರಲ್ಲಿದ್ದ ಬ್ಯಾಗ್ ತೆಗೆದುಕೊಂಡು ಹೋಗಿದ್ದಾನೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.