Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಾ.ನಗರದಲ್ಲಿ ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆ!
ಕರ್ನಾಟಕಪ್ರಮುಖ

ಚಾ.ನಗರದಲ್ಲಿ ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ಅರಣ್ಯ ಸಂಪತ್ತಿನ ಖನಿಜವಾಗಿತ್ತು. ಇದೀಗ ಚಿನ್ನದ ನಿಕ್ಷೇಪವನ್ನು ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಪತ್ತೆ ಮಾಡಿದೆ. ದೇಶದಲ್ಲಿ ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯತ್ತ ಸಾಗುತ್ತಿರುವ ಮಧ್ಯೆಯೇ ಚಿನ್ನದ ಗಣಿ ಪತ್ತೆಯಾಗಿದೆ.

ಭಾರತದ ಭೌಗೋಳಿಕ ನಕ್ಷೆಯಲ್ಲಿ ಮಿನರಲ್ ಅಂಶಗಳನ್ನು ಪತ್ತೆ ಮಾಡುವ ವೇಳೆ ಮಿನರಲೈಸೇಷನ್ ಮ್ಯಾಪ್‌ನಲ್ಲಿ ಚಾಮರಾಜನಗರ ಜಿಲ್ಲೆಯ  ಹನೂರು ತಾಲೂಕಿನ ಕೌದಳ್ಳಿ, ಅಜ್ಜೀಪುರ, ದೊಡ್ಡಾಲತ್ತೂರು ವ್ಯಾಪ್ತಿಯಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಹೀಗಾಗಿ ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಅಧಿಕಾರಿಗಳು ಖದ್ದು ಸ್ಥಳ ಪರಿಶೀಲನೆ ಮಾಡಿ, ಚಿನ್ನದ ನಿಕ್ಷೇಪದ ಬಗ್ಗೆ ವೈಜ್ಞಾನಿಕ ಉಪಕರಣಗಳ ಮೂಲಕ ಶೋಧ ನಡೆಸಿದ್ದಾರೆ.

 

ಪ್ರಾಥಮಿಕ ಹಂತದ ಅನ್ವೇಷಣೆಯಲ್ಲಿ ಚಿನ್ನದ ನಿಕ್ಷೇಪ ಹಾಗು ಚಿನ್ನಕ್ಕೆ ಸಂಬಂಧಿಸಿದಂತೆ ತಾಮ್ರ, ಬೆಳ್ಳಿ ಖನಿಜಾಂಶಗಳು ಸಹ ಪತ್ತೆಯಾಗಿವೆ. ಮೂರು ಹಂತಗಳಲ್ಲಿ ಶೋಧ ಕಾರ್ಯ ನಡೆಯಲಿದ್ದು, ಚಿನ್ನದ ನಿಕ್ಷೇಪವಿರುವ ಕೋರ್ ಏರಿಯಾದಲ್ಲಿ ಎಷ್ಟು ಟನ್ ಚಿನ್ನ ಸಿಗುತ್ತದೆ ಹಾಗೂ ಯಾವ ಗ್ರೇಡ್ ಚಿನ್ನ ದೊರೆಯುತ್ತದೆ ಎಂಬುದು ಖಚಿತವಾಗಬೇಕಿದೆ.

ಜಿಎಸ್ಐ ಅಧಿಕಾರಿಗಳು ಹಾಗೂ ಭೂವಿಜ್ಞಾನಿಗಳ ತಂಡ ರಾಜ್ಯದಾದ್ಯಂತ ಜಿಯಾಲಜಿಕಲ್ ಮ್ಯಾಪಿಂಗ್ ಹಾಗೂ ಭೂಮಿಯೊಳಗೆ ಖನಿಜಗಳನ್ನು ಪತ್ತೆ ಹಚ್ಚುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಅದರಂತೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಜ್ಜೀಪುರ, ಕೌದಳ್ಳಿ, ದೊಡ್ಡ ಆಲತ್ತೂರು ಗ್ರಾಮಗಳಲ್ಲಿ ಪ್ರಾಥಮಿಕ ಹಂತದ ಜಿ-ಫೋರ್ ಸರ್ವೆಯಲ್ಲಿ ಚಿನ್ನದ ಲಭ್ಯತೆಯನ್ನು ಗುರುತಿಸಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ತಿಳಿಸಿದರು.6 ತಿಂಗಳು ಸಂಶೋಧನೆ ನಡೆಯಲಿದೆ. ಆ ಅವಧಿಯಲ್ಲಿ ಚಿನ್ನದ ಲಭ್ಯತೆ ಖಚಿತವಾದರೆ ಮುಂದಿನ ಪ್ರಕ್ರಿಯೆಗಳು ನಡೆಯಲಿವೆ. ಚಿನ್ನವಲ್ಲದೆ, ಬೆಳ್ಳಿ, ತಾಮ್ರ ಸಹಿತ ವಿರಳ ಲೋಹಗಳ ನಿಕ್ಷೇಪ ಪತ್ತೆಯೂ ನಡೆದಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರದ ಎನ್ಎಂಇಟಿ ಜಂಟಿ ಪ್ರಾಯೋಜಕತ್ವದಲ್ಲಿ ಸರ್ವೆ ನಡೆಯುತ್ತಿದೆ. ಈ ಎಲ್ಲಾ ಕಾರ್ಯಗಳು ಪೂರ್ಣಗೊಳ್ಳಲು ಕನಿಷ್ಟ ಎರಡು ವರ್ಷ ಕಾಲಾವಕಾಶ ಬೇಕಾಗುತ್ತದೆ ಎಂದರು.

 

 

TAGGED:#gold #deposits #discovered #Chamarajanagar #Karnataka
Share This Article
Facebook Twitter Copy Link Print
Previous Article ಖಾಸಗಿ ಅಂಗದಲ್ಲಿ ಮೊಬೈಲ್ ಚಾರ್ಜರ್ ಸೇರಿಸಿಕೊಂಡ ಬಾಲಕ
Next Article Burj Khalifa ಬುರ್ಜ್ ಖಲೀಫಾಗೆ ಬಡಿದ ಸಿಡಿಲು: ಅದ್ಭುತ ಫೋಟೋ ಹಂಚಿಕೊಂಡ ಕ್ರೌನ್ ಪ್ರಿನ್ಸ್, ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?