Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಆಸ್ತಿಯಲ್ಲಿ ಪಾಲಿಲ್ಲ; ಕೋರ್ಟ್ ತೀರ್ಪು
Uncategorizedದೇಶಪ್ರಮುಖ

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಆಸ್ತಿಯಲ್ಲಿ ಪಾಲಿಲ್ಲ; ಕೋರ್ಟ್ ತೀರ್ಪು

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ನವದೆಹಲಿ: ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗಲ್ಲ.ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು. ಇದರಲ್ಲಿ ಸುಪ್ರೀಂ ಕೋರ್ಟ್ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಮಹತ್ವದ ಆದೇಶ ನೀಡಿದೆ.ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್ ಚಂದ್ರನ್ ನೇತೃತ್ವದ ನ್ಯಾಯ ಪೀಠವು ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯವು ಶೈಲಾ ಜೋಸೆಫ್‌ಗೆ ಅವರ ತಂದೆ ಎನ್.ಎಸ್. ಶ್ರೀಧರನ್ ಅವರ ಆಸ್ತಿಯಲ್ಲಿ ಪಾಲು ನೀಡಬೇಕು ಎಂಬ ತೀರ್ಪನ್ನು ರದ್ದುಗೊಳಿಸಿದೆ. ಆ ಮಹಿಳೆ ಬೇರೆ ಧರ್ಮದ ಯುವಕನನ್ನು ವಿವಾಹವಾಗಿದ್ದರು. ಹೀಗಾಗಿ, ಶ್ರೀಧರನ್ ತನ್ನ ಮಗಳನ್ನು ದೂರವೇ ಇಟ್ಟಿದ್ದರು. ತಮ್ಮ ವಿಲ್ನಲ್ಲಿ ಕೂಡ ಆಕೆಗೆ ಪಾಲು ಬರೆದಿರಲಿಲ್ಲ.ಇದನ್ನು ವಿರೋಧಿಸಿ, ತನ್ನ ತಂದೆಯ ಆಸ್ತಿಯಲ್ಲಿ ತನಗೂ ಪಾಲು ಬೇಕೆಂದು ಆಕೆ ಕಾನೂನು ಮೊರೆಹೋಗಿದ್ದರು. ಕೆಳ ನ್ಯಾಯಾಲಯಗಳು ಆ ವಿಲ್ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದವು. ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಅವರ ಇತರ 8 ಸಹೋದರರೊಂದಿಗೆ ಸಮಾನ ಪಾಲು ನೀಡಬೇಕೆಂದು ತೀರ್ಪು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದ ಈ ತೀರ್ಪನ್ನು ರದ್ದುಗೊಳಿಸಿದೆ. ವಿಲ್ ಪ್ರಕಾರ ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿದೆ.“ಇದು ಆಕೆಯ ತಂದೆ ಸ್ವಇಚ್ಛೆಯಿಂದ ಬರೆದಿರುವ ವಿಲ್. ಇದರಲ್ಲಿ ಯಾವುದೇ ಹಸ್ತಕ್ಷೇಪ ಸಾಧ್ಯವಿಲ್ಲ. ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಲಾಗಿದೆ. ಶೈಲಾ ತನ್ನ ತಂದೆಯ ಆಸ್ತಿಗಳ ಮೇಲೆ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ. ಎಲ್ಲ ಆಸ್ತಿಯನ್ನೂ ಆಕೆಯ ತಂದೆಯ ಇಚ್ಛೆಯ ಪ್ರಕಾರವೇ ಆಕೆಯ ಇತರ ಸಹೋದರರಿಗೆ ಉಯಿಲು (ವಿಲ್) ಮೂಲಕ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಲಿಂಗ ಸಮಾನತೆಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಆ ಪ್ರಕಾರ ಹೇಳುವುದಾದರೆ ಮಹಿಳೆಗೂ ಆಸ್ತಿಯಲ್ಲಿ ಸಮಾನ ಹಕ್ಕಿದೆ. ಆದರೆ, ಈ ಪ್ರಕರಣದಲ್ಲಿ ವಿಲ್ ಬರೆದ ವ್ಯಕ್ತಿಯ ಇಚ್ಛೆ ಮುಖ್ಯವಾಗಿದೆ. ಅವರೇನಾದರೂ ವಿಲ್ ಬರೆಯದೇ ಇದ್ದಿದ್ದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಮಗಳಿಗೂ ಪಾಲು ಇರುತ್ತಿತ್ತು. ಆದರೆ, ಅವರು ಮಗಳಿಗೆ ಆಸ್ತಿ ಸಿಗಬಾರದು ಎಂಬ ಕಾರಣಕ್ಕೆ ಉದ್ದೇಶಪೂರ್ವಕವಾಗಿ ವಿಲ್ ಬರೆದಿರುವುದರಿಂದ ಮತ್ತು ಇದು ಅವರ ಕೊನೆಯ ವಿಲ್ ಆಗಿರುವುದರಿಂದ ಅವರ ನಿರ್ಧಾರವೇ ಅಂತಿಮವಾಗಿರುತ್ತದೆ. ಕಾನೂನು ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ನ್ಯಾಯಪೀಠವು ಸ್ಪಷ್ಟಪಡಿಸಿದೆ.

ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ

TAGGED:If a daughter marries a person of a different caste or religionshe will not inherit her father's property; Supreme Court's landmark ruling
Share This Article
Facebook Twitter Copy Link Print
Previous Article Bairati Basavaraj fears arrest ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಂಧನ ಭೀತಿ
Next Article ನಟ ಚರಣ್ ರಾಜ್ ಪತ್ನಿಯನ್ನು ತಬ್ಬಿಬ್ಬು ಮಾಡಿದ್ದ ನಟಿ ವಿಜಯಶಾಂತಿ!

Popular Posts

Bangalore Property Big Save On Conversion ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಇನ್ನಷ್ಟು ಅಗ್ಗ: ಶುಲ್ಕ ಕೇವಲ 2%, ಬೆಂಗಳೂರಿನ 7 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಭಾರಿ ಲಾಭ

2 Min Read

Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

2 Min Read

Paper Leak Bill On Loksabha | ಲೋಕಸಭೆಯಲ್ಲಿ ಇಂದು ‘ಪೇಪರ್ ಲೀಕ್ ತಡೆ ಮಸೂದೆ’ ಮಂಡನೆ

2 Min Read

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read

You Might Also Like

ದೇಶವಿದೇಶ

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read
ದೇಶಪ್ರಮುಖವೈರಲ್

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read
ಕರ್ನಾಟಕಆರೋಗ್ಯಪ್ರಮುಖ

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read
ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?