Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಹಿರಿಯ ಪತ್ರಕರ್ತ ದೊಡ್ಡ ಬೊಮ್ಮಯ್ಯ ಶನಿವಾರ (ಡಿ.20) ಬೆಳಗ್ಗೆ ಹೃದಯಾಘಾತದಿಂದ ಬಸ್‌ನಲ್ಲಿಯೇ ನಿಧನರಾದರು.
ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಶುಕ್ರವಾರವಷ್ಟೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಸುದ್ದಿ ವರದಿ ಕೆಲಸ ಮುಗಿಸಿ ಶನಿವಾರ ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದ ದೊಡ್ಡಬೊಮ್ಮಯ್ಯ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಬೆಳಗ್ಗೆ ಮೆಜೆಸ್ಟಿಕ್‌ನಲ್ಲಿ ಬಸ್ಸಿನಿಂದ ಇಳಿಯುವ ಮೊದಲೇ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಬಸ್ಸಿನಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದವರಾದ ದೊಡ್ಡಬೊಮ್ಮಯ್ಯ, ಬೆಂಗಳೂರಿನಲ್ಲಿ ಸಂಜೆವಾಣಿ ದಿನಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನಗಳಲ್ಲಿ ಸಹ ಅರೆಕಾಲಿಕ ವೃತ್ತಿ ಮಾಡುತ್ತಿದ್ದರು. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು.
ರಾಜ್ಯದಲ್ಲಿ ಎರಡು ದಿನ ಶೀತ ಗಾಳಿ : ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್