newsics.com
ಬೆಂಗಳೂರು: ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕದ ಈ ಕೆಳಗಿನ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ(ಆ.02) ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ನಾಳೆ (ಆ.2) ರಜೆ ಘೋಷಿಸಿದ್ದಾರೆ.
ಶಾಲೆ, PU ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ. ಜೊತೆಗೆ ನದಿ, ಸಮುದ್ರ ತೀರದ ಜನರಿಗೆ ಎಚ್ಚರವಹಿಸಲು ಸೂಚಿಸಲಾಗಿದೆ. ಇನ್ನು ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜಿಗೆ ಎಂದಿನಂತೆ ತರಗತಿ ನಡೆಯಲಿದೆ.