Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಾಜಿ ಪತ್ನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಗಾಯಕ; 50 ಕೋಟಿ ರೂ. ಪರಿಹಾರ ಕೋರಿ ಅರ್ಜಿ ಸಲ್ಲಿಕೆ
ಪ್ರಮುಖಮನರಂಜನೆ

ಮಾಜಿ ಪತ್ನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಗಾಯಕ; 50 ಕೋಟಿ ರೂ. ಪರಿಹಾರ ಕೋರಿ ಅರ್ಜಿ ಸಲ್ಲಿಕೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ಬಾಲಿವುಡ್ ಹಿನ್ನೆಲೆ ಗಾಯಕ, ಕುಮಾರ್ ಸಾನು ಎಂದೇ ಜನಪ್ರಿಯರಾಗಿರುವ ಸಾನು ಕುಮಾರ್ ಭಟ್ಟಾಚಾರ್ಜಿ ತಮ್ಮ ಮಾಜಿ ಪತ್ನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ತಮ್ಮ ಖ್ಯಾತಿಗೆ ಹಾನಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಕ್ಷಮೆಯಾಚಿಸಬೇಕು ಮತ್ತು 50 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದಾರೆ. ವಕೀಲೆ ಸನಾ ರಯೀಸ್ ಖಾನ್ ಮೂಲಕ ಸಲ್ಲಿಸಲಾದ ಈ ಮೊಕದ್ದಮೆಯಲ್ಲಿ, ಸಾನು ಮತ್ತು ಅವರ ಕುಟುಂಬದ ವಿರುದ್ಧ ಅವಹೇಳನಕಾರಿಯಾದ ಯಾವುದೇ ಹೇಳಿಕೆಗಳು ಅಥವಾ ಪೋಸ್ಟ್‌ಗಳನ್ನು ಮಾಡದಂತೆ ಅವರ ಮಾಜಿ ಪತ್ನಿ ರೀಟಾ ಭಟ್ಟಾಚಾರ್ಯ ಅವರಿಗೆ ಸೂಚಿಸಲಾಗಿದೆ.

ಇದರ ಜತೆಗೆ ಸಾನು ಅವರ ಮಾಜಿ ಪತ್ನಿ ರೀಟಾ, ಮೆಟಾ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳು ತಮ್ಮ ಸೈಟ್‌ಗಳಲ್ಲಿ ಈಗಾಗಲೇ ಪ್ರಕಟಿಸಿರುವ ಎಲ್ಲ ಅವಹೇಳನಕಾರಿ ಪೋಸ್ಟ್‌ ತೆಗೆದುಹಾಕುವಂತೆ ನಿರ್ದೇಶನ ನೀಡಲಾಗಿದೆ.

ರೀಟಾ ಭಟ್ಟಾಚಾರ್ಯ ಸಾಮಾಜಿಕ ಮಾಧ್ಯಮ ವೇದಿಕೆಯಾದ ವೈರಲ್ ಭಯಾನಿ ಮತ್ತು ಫಿಲ್ಮ್ ವಿಂಡೋಗೆ ನೀಡಿದ್ದ ಸಂದರ್ಶನದಲ್ಲಿ ಗರ್ಭಿಣಿಯಾಗಿದ್ದಾಗ ತನ್ನೊಂದಿಗೆ ಕುಮಾರ್ ಸಾನು ಕೆಟ್ಟದಾಗಿ ವರ್ತಿಸಿದ್ದರು ಎಂದು ಆರೋಪಿಸಿದ್ದರು. ತನಗೆ ಸರಿಯಾಗಿ ಆಹಾರ ನೀಡುತ್ತಿರಲಿಲ್ಲ. ಅಡುಗೆಮನೆಗೆ ಸೀಮಿತಗೊಳಿಸಿದ್ದರು ಮತ್ತು ವೈದ್ಯಕೀಯ ಆರೈಕೆಯನ್ನೂ ಪಡೆಯಲು ಬಿಟ್ಟಿರಲಿಲ್ಲ ಎಂದು ದೂರಿದ್ದರು.

ಇನ್ನು ಈ ಆರೋಪಗಳನ್ನು ಕುಮಾರ್ ಸಾನು ಹಾಗೂ ಅವರ ಕಾನೂನು ತಂಡವು ತಳ್ಳಿ ಹಾಕಿದೆ. ಇದು ದುರುದ್ದೇಶಪೂರಿತ ಮತ್ತು ಅವರ ಖ್ಯಾತಿಗೆ ಗಂಭೀರ ಹಾನಿಯನ್ನುಂಟು ಮಾಡಿದೆ ಎಂದು ವಾದಿಸಿದೆ. ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ 2001ರ ವಿಚ್ಛೇದನ ಒಪ್ಪಂದದಲ್ಲಿನ ಸಮ್ಮತಿ ಷರತ್ತನ್ನು ಉಲ್ಲೇಖಿಸಲಾಗಿದೆ. ಅದರಲ್ಲಿ ಇಬ್ಬರೂ ಕೂಡ ಭವಿಷ್ಯದಲ್ಲಿ ಒಬ್ಬರ ಮೇಲೊಬ್ಬರು ಆರೋಪಗಳನ್ನು ಮಾಡಬಾರದು ಎಂದು ಷರತ್ತು ವಿಧಿಸಿದೆ ಎಂದು ವರದಿಯಾಗಿದೆ. ಆದರೆ ರೀಟಾ ಸಂದರ್ಶನದಲ್ಲಿ ಕೆಲವು ಹೇಳಿಕೆಗಳನ್ನು ನೀಡಿರುವುದು ಈ ಷರತ್ತಿನ ಉಲ್ಲಂಘನೆ ಎಂದು ಸಾನು ಆರೋಪಿಸಿದ್ದಾರೆ.

ಮೊಕದ್ದಮೆಯ ಪ್ರಕಾರ ಈ ವಿಡಿಯೊಗಳು ಭಾರಿ ವೈರಲ್ ಆಗಿದ್ದು, ಸುಮಾರು 1.5 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

ಸಾನು ಕಾನೂನಿನ ಮೂಲಕ ಶೋ-ಕಾಸ್ ನೋಟಿಸ್ ನೀಡಿದ ನಂತರ, ಸಂಬಂಧಪಟ್ಟ ಸಾಮಾಜಿಕ ಮಾಧ್ಯಮ ವೇದಿಕೆಗಳು ವಿಡಿಯೊಗಳನ್ನು ಅಳಿಸಿಹಾಕಿದವು. ಮೆಟಾ ಮತ್ತು ಯೂಟ್ಯೂಬ್‌ಗೆ ನೋಟಿಸ್ ಜಾರಿ ಮಾಡಲಾಗಿದೆ.

ನಟಿ ನಿವೇತಾ ಥಾಮಸ್‌ ನಾನವಳಲ್ಲ ಎಂದಿದ್ಯಾಕೆ?

TAGGED:Singer files defamation case against ex-wife; seeks Rs 50 crore compensation
Share This Article
Facebook Twitter Copy Link Print
Previous Article ನಟಿ ನಿವೇತಾ ಥಾಮಸ್‌ ನಾನವಳಲ್ಲ ಎಂದಿದ್ಯಾಕೆ?
Next Article ದೀರ್ಘಾಯುಷಿ ಜಪಾನೀಯರು ಏನು ತಿನ್ನುತ್ತಾರೆ?; ಹೆಚ್ಚು ಕಾಲ ಜೀವಿಸಲು ಈ ರೀತಿ ಮಾಡಿ ಸಾಕು

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?