Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಋತುಮಾನದ ಬದಲಾವಣೆಗಳು ಕೇವಲ ಹವಾಮಾನದ ಬದಲಾವಣೆಯಲ್ಲ, ಇದು ಮಾನವನ ಆರೋಗ್ಯದ ಮೇಲೆ, ಪರಿಣಾಮವನ್ನು ಬೀರುತ್ತದೆ. ಸದ್ಯ ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಡಿಸೆಂಬರ್ ಸೇರಿದಂತೆ ಜನವರಿಯಿಂದ ಮಾರ್ಚ್ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಲ್ಯಾಬ್‌ಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್‌ಗಳನ್ನು ಇರಿಸಿಕೊಳ್ಳುವುದು, ಫ್ಲೂ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್‌ಗೆ ಸೂಚಿಸಲಾಗಿದೆ.
ಸೀಸನಲ್ ಫ್ಲೂಯಿಂದ ಮಕ್ಕಳು, ಹಿರಿಯರು, ಗರ್ಭಿಣಿಯರು, ಕೋಮಾರ್ಬಿಟೀಸ್ ಪೇಶೆಂಟ್ಗಳಿಗೆ ಹೆಚ್ಚಿನ ಅಪಾಯಕಾರಿ ಆಗಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈಕೈ ನೋವು, ಶೀತ, ಒಣ ಕೆಮ್ಮು ಸೀಸನಲ್ ಫ್ಲೂನ ಪ್ರಮುಖ ಗುಣ ಲಕ್ಷಣಗಳಾಗಿದ್ದು, ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರ ಅಥವಾ 3 ವಾರಗಳ ಕಾಲ ಇರಲಿದೆ. ಹೀಗಾಗಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕ್ರಮ ವಹಿಸಲು ಸೂಚನೆ ನೀಡಿದೆ.
- ಐಎಲ್ಐ, ಸಾರಿ ಪ್ರಕರಣಗಳ ಬಗ್ಗೆ ಗಮನ ಹರಿಸಲು ಸೂಚನೆ
- ಪ್ರತಿ ದಿನ ಕನಿಷ್ಠ 5ರಷ್ಟು ಐಎಲ್ಐ ಕೇಸ್, 100ರಷ್ಟು ಸಾರಿ ಕೇಸ್ಗಳನ್ನ ಪರೀಕ್ಷೆ ಮಾಡಬೇಕು
- ಎಲ್ಲಾ ಪ್ರಯೋಗಾಲಯಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್ಗಳನ್ನ ಇರಿಸಿಕೊಳ್ಳಲು ಸೂಚನೆ
- ಅಗತ್ಯ ಔಷಧಗಳ ಶೇಖರಣೆ
- ಪಿಪಿಇ ಕಿಟ್ಗಳು, ಎನ್ 95 ಮಾಸ್ಕ್ ಸೇರಿ ಅಗತ್ಯ ಔಷಧಗಳ ಶೇಖರಣೆಗೆ ಸೂಚನೆ
- oseltamivir ಮಾತ್ರೆಗಳನ್ನು ದಾಸ್ತಾನು ಮಾಡಿ ಅಗತ್ಯಕ್ಕೆ ತಕ್ಕಂತೆ ಪ್ರಿಸ್ಕ್ರೈಬ್ ಮಾಡಬೇಕು
- ಕ್ಲಿನಿಕಲ್ ಮ್ಯಾನೇಜ್ಮೆಂಟ್ ಹಾಗೂ ಕ್ರಿಟಿಕಲ್ ಕೇರ್ ಸಿದ್ಧತೆ
- ವೆಂಟಿಲೇಟರ್ಗಳ ಸಿದ್ಧತೆಗೆ ಸಲಹೆ
- ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್‌ಗೆ ಕರೆ ನೀಡಲಾಗಿದೆ.