Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ರಾಜ್ಯದಲ್ಲಿ ಮೈಕೊರೆಯುವ ಚಳಿ ಜನಜೀವನವನ್ನು ತತ್ತರಗೊಳಿಸಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳು ಥಂಡಾ ಹೊಡೆದಿವೆ. ಚಳಿ ಹೆಚ್ಚಾದ ಹಿನ್ನಲೆ ಉತ್ತರ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ಕೂಡ ನೀಡಿದೆ.
ವಿಜಯಪುರದಲ್ಲಿ ನಿನ್ನೆ(ಡಿ.21) 6.9 ಡಿಗ್ರಿ ಸೆಲ್ಸಿಯಲ್ಸ್ ಉಷ್ಣಾಂಶ ದಾಖಲಾಗಿತ್ತು.ಕಳೆದ 20 ವರ್ಷಗಳ ಅಂಕಿ ಅಂಶಗಳ ಪ್ರಕಾರ ಮೂರನೇ ಬಾರಿಗೆ ದಾಖಲಾದ ಅತಿ ಕಡಿಮೆ ಉಷ್ಣಾಂಶ ಇದಾಗಿದೆ. ಅಂತೆಯೇ ಇಂದೂ ಉತ್ತರ ಕರ್ನಾಟಕದೆಲ್ಲೆಡೆ ಶೀತದಲೆಯ ಪ್ರಮಾಣ ಹೆಚ್ಚಿದ್ದು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.
https://www.newsics.com/2025/12/22/sinful-father-kills-pregnant-daughter-for-marrying-dalit-youth/