Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಇಂದು ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಮತ್ತು ಸುದೀಪ್ ಅಭಿಮಾನಿಗಳ ನಡುವೆ ನಡೀತಿರೋ ರಂಪಾಟ ನೋಡಿದ್ರೆ ಹೊಸಬರಿಗೆ ಆಶ್ಚರ್ಯ ಆಗಬಹುದು. ಆದ್ರೆ ಗಾಂಧಿನಗರದ ಹಳಬರಿಗೆ ಇದು ಹೊಸದೇನಲ್ಲ. ಬರೋಬ್ಬರಿ 17 ವರ್ಷಗಳ ಹಿಂದೆಯೇ ಇವರಿಬ್ಬರ ಫ್ಯಾನ್ಸ್ ವಾರ್ ಜೋರಾಗಿಯೇ ನಡೆದಿತ್ತು.
ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸುವುದು ನಡೆಯುತ್ತಲೇ ಇದೆ. ಇದೀಗ ಕಿಡಿಗೇಡಿಗಳು ನಟ ಸುದೀಪ್ ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಬಗ್ಗೆ ಬಹಳ ಕೆಟ್ಟದಾಗಿ ಪೋಸ್ಟ್ ಮಾಡುತ್ತಿದ್ದಾರೆ. ಆ ಪದಗಳನ್ನು ಕೂಡ ಇಲ್ಲಿ ಬಳಸಲು ಸಾಧ್ಯವಾಗುತ್ತಿಲ್ಲ. ಅಷ್ಟು ಕೆಟ್ಟದಾಗಿ ಕಾಮೆಂಟ್ಸ್ ಮಾಡುತ್ತಿದ್ದಾರೆ. ನಿಜಕ್ಕೂ ಈ ಫ್ಯಾನ್ಸ್ ಬೇರೆಯದ್ದೇ ಸ್ವರೂಪ ಪಡೆಯುತ್ತಿದೆ.
ಎದುರು ನಿಂತು ಮಾತನಾಡಲು ಧೈರ್ಯ ಇಲ್ಲದ ಹೇಡಿಗಳು ಹೀಗೆ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಯಾವುದೋ ಮೂಲೆಯಲ್ಲಿ ಕೂತು ಅವಹೇಳನಕಾರಿ ಪದಗಳನ್ನು ಬಳಸಿ ಮಾನಸಿಕವಾಗಿ ಕಿರುಕುಳ ಕೊಡುತ್ತಾರೆ. ‘ಮಾರ್ಕ್’ ಸಿನಿಮಾ ಪೈರಸಿ ಬಗ್ಗೆ ಇಲ್ಲಿ ಚರ್ಚೆ ನಡೀತಿದೆ. ಕೆಲವರು ಸಿನಿಮಾ ಪೈರಸಿ ಮಾಡುವುದಾಗಿ ಬೆದರಿಕೆ ಹಾಕಿದ್ದಕ್ಕೆ ಯಾವುದೇ ಯುದ್ಧಕ್ಕೆ ಸಿದ್ಧ ಎಂದು ಸುದೀಪ್ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಅದರ ಬೆನ್ನಲ್ಲೇ ರಾಮನಗರದಲ್ಲಿ ವಿಜಯಲಕ್ಷ್ಮಿ ದರ್ಶನ್ ಪರೋಕ್ಷವಾಗಿ ಕೌಂಟರ್ ಕೊಟ್ಟಿದ್ದರು. ಆದರೆ ಯಾರಿಗೆ, ಯಾವ ವಿಚಾರಕ್ಕೆ ಎನ್ನುವುದನ್ನು ಸ್ಪಷ್ಟಪಡಿಸಲಿಲ್ಲ. ಇದ್ದೆಲ್ಲದರ ನಡುವೆ ನಟ ಸುದೀಪ್ ಅವರ ಪತ್ನಿ, ಮಗಳ ಹೆಸರು ಎಳೆದು ತರುವುದು ಯಾಕೆ?
ದರ್ಶನ್ ಹಾಗೂ ಸುದೀಪ್ ಫ್ಯಾನ್ಸ್ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಕೆಸರೆರಚಾಟ ನಡೀತಿದೆ. ಆದರೆ ಧನ್ವೀರ್ ಗೌಡ ಇದಕ್ಕೆ ಮತ್ತಷ್ಟು ಇಂಬು ಕೊಡುವಂತಹ ಪೋಸ್ಟ್ ಮಾಡಿ ಅಭಿಮಾನಿಗಳನ್ನು ಪ್ರಚೋದಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರ್ತಿದೆ.