Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ವಿದ್ಯಾರ್ಥಿನಿ! ಸ್ಕೂಲ್ ಬಸ್ ಚಾಲಕನಿಂದ ಲೈಂ*ಗಿಕ ದೌರ್ಜನ್ಯ
ಕರ್ನಾಟಕಪ್ರಮುಖ

ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ವಿದ್ಯಾರ್ಥಿನಿ! ಸ್ಕೂಲ್ ಬಸ್ ಚಾಲಕನಿಂದ ಲೈಂ*ಗಿಕ ದೌರ್ಜನ್ಯ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ: 10ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಶಾಲೆ ಬಸ್ ಚಾಲಕ ತಲೆಮರೆಸಿಕೊಂಡಿದ್ದಾನೆ.

ನಿತ್ಯ ಬಸ್ನಲ್ಲಿ ವಿದ್ಯಾರ್ಥಿನಿಗೆ ಚಾಕೋಲೆಟ್ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಪರಿಣಾಮ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಎರಡು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ.

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ಚನ್ನರಾಯಪಟ್ಟಣ ತಾಲ್ಲೂಕಿನ ಬರಗೂರು ಗ್ರಾಮದ ರಂಜನ್ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದ್ದು, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ವಿಚಾರ ತಿಳಿಯುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದಾನೆ.

ಪ್ರತಿ ದಿನ ಶಾಲೆಗೆ ಬಸ್ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ರಂಜತ್ ಪುಸಲಾಯಿಸಿ ಶ್ರವಣಬೆಳಗೊಳಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇದರಿಂದ ವಿದ್ಯಾರ್ಥಿನಿ ಎರಡು ದಿನದ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇನ್ನು ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲು ಅಧಿಕಾರಿಗಳು ತೀರ್ಮಾನಿಸಿದ್ದು, ಈ ಬಗ್ಗೆ ರಂಜತ್ ವಿರುದ್ಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲಿಸರು ತನಿಖೆ ನಡೆಸಿದ್ದಾರೆ.

ಇನ್ನಷ್ಟು ಪ್ರಕರಣ:

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ 16 ವರ್ಷದ ಶಾಲಾ ಬಾಲಕಿ ಸಂಬಂಧಿಕನಿಂದಲೇ ದೌರ್ಜನ್ಯಕ್ಕೊಳಗಾಗಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿತ್ತು. ಬಳಿಕ ಪೋಕ್ಸೋ ಪ್ರಕರಣದಡಿ ಆರೋಪಿ ಮಲ್ಲೇಶ್ (35)ನನ್ನು ಪೊಲೀಸರು ಬಂಧಿಸಿದ್ದರು.

ಯಾದಗಿರಿ ಜಿಲ್ಲೆಯ ಶಹಪುರದಲ್ಲಿರುವ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದಾಗ ಗಂಡುವಿಗೆ ಜನ್ಮ ನೀಡಿದ್ದಳು. ಈ ಘಟನೆ ವಸತಿ ನಿಲಯದಲ್ಲಿರುವ ಇತರೆ ವಿದ್ಯಾರ್ಥಿನಿಯ ಪೋಷಕರಲ್ಲಿ ಆತಂಕ ಹುಟ್ಟಿಸಿತ್ತು. ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ಕೊಪ್ಪಳ ಜಿಲ್ಲೆಯ ಕುಕನೂರು ವಸತಿ ನಿಲಯದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅತ್ಯಾಚಾರ ಆರೋಪಿ ಸೇರಿದಂತೆ ನಿರ್ಲಕ್ಷ್ಯ ತೋರಿದ ವಸತಿ ನಿಲಯದ ಸಿಬ್ಬಂದಿ ಸೇರಿ ಒಟ್ಟು 6 ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

TET 2025 ಟಿಇಟಿ ಫಲಿತಾಂಶ ಪ್ರಕಟ: ದಾಖಲೆ ಮುರಿದ ರಿಸಲ್ಟ್, 97,383 ಮಂದಿ ಅರ್ಹರು

ಕೃಷಿ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ: 2.50 ಕೋಟಿ ಅಕ್ರಮ ಆಸ್ತಿ ಪತ್ತೆ

ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣುತ್ತೆ..

ಸಿಪ್ಪೆ ತೆಗೆಯದೆ ‘ಕಿತ್ತಳೆ ಹಣ್ಣು’ ಸಿಹಿಯಾಗಿದ್ಯಾ.? ಈ ರೀತಿ ಚೆಕ್ ಮಾಡಿ

TAGGED:Class 10 student gives birth to baby! Sexual assault by school bus driver
Share This Article
Facebook Twitter Copy Link Print
Previous Article TET 2025 ಟಿಇಟಿ ಫಲಿತಾಂಶ ಪ್ರಕಟ: ದಾಖಲೆ ಮುರಿದ ರಿಸಲ್ಟ್, 97,383 ಮಂದಿ ಅರ್ಹರು
Next Article ACC Cement Company ವಿಲೀನ ಎಫೆಕ್ಟ್: ಶಾಶ್ವತವಾಗಿ ಮರೆಯಾಗಲಿದೆ ಎಸಿಸಿ ಸಿಮೆಂಟ್ ಕಂಪನಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?