Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿನ್ನ ಮತ್ತು ಬೆಳ್ಳಿ ಬೆಲೆ ಒಂದಕ್ಕೊಂದು ಪೈಪೇಟಿ ನೀಡುವಂತೆ ಏರುತ್ತಲೇ ಸಾಗಿವೆ. ಒಂದು ವರ್ಷದ ಹಿಂದಷ್ಟೇ ಕೈಗೆಟುಕುವ ಬೆಲೆಯಲ್ಲಿದ್ದ ಚಿನ್ನದ ದರ ಈ ವರ್ಷದ ಡಿಸೆಂಬರ್‌ಗೆ ಸುಮಾರು ಶೇಕಡಾ 74 ರಿಂದ 77ರಷ್ಟು ದಾಖಲೆಯ ಭರ್ಜರಿ ಏರಿಕೆ ಕಂಡಿದೆ. ಬಂಗಾರ, ಬೆಳ್ಳಿಯ ದಿಢೀರ್ ಏರಿಕೆ ಕಾರಣಕ್ಕೆ ಗ್ರಾಹಕರು ಖರೀದಿಗೆ ಮನಸ್ಸು ಮಾಡುತ್ತಿಲ್ಲ. ಹೂಡಿಕೆ ದೃಷ್ಟಿಯಿಂದ ಚಿನ್ನಕ್ಕೆ ಬೇಡಿಕೆ ಮುಂದುವರಿದಿದೆ.
ಚಿನ್ನದ ಬೆಲೆ ಗ್ರಾಮ್ಗೆ 30 ರೂ ಸಾಧಾರಣ ಏರಿಕೆ ಕಂಡರೆ, ಬೆಳ್ಳಿ ಬೆಲೆ 10 ರೂ ಜಂಪ್ ಪಡೆದಿದೆ. ಚಿನ್ನಕ್ಕಿಂತಲೂ ಬೆಳ್ಳಿಗೆ ಬೇಡಿಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ ಪಡೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,27,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,38,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,27,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 23,300 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,893 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,735 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,420 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 233 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,893 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,735 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 233 ರೂ
https://www.newsics.com/2025/12/25/a-newlywed-lost-her-life-before-the-month-was-over/